ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ಧನ ರೆಡ್ಡಿ'ಗೆ ಬಿಗ್ ರಿಲೀಫ್ - ಭಾರತ ಬಿಟ್ಟು ಬೇರೆಡೆ ತೆರಳದಂತೆ ಕೋರ್ಟ್ ಸೂಚನೆ

ಜೂನ್ 11, 2025 - 11:59
 0  6
ಅಕ್ರಮ ಗಣಿಗಾರಿಕೆ ಪ್ರಕರಣ: ಜನಾರ್ಧನ ರೆಡ್ಡಿ'ಗೆ ಬಿಗ್ ರಿಲೀಫ್ - ಭಾರತ ಬಿಟ್ಟು ಬೇರೆಡೆ ತೆರಳದಂತೆ ಕೋರ್ಟ್ ಸೂಚನೆ

ಹೈದರಾಬಾದ್: ಅಕ್ರಮ ಗಣಿಗಾರಿಕೆ ಹಗರಣ ಪ್ರಕರಣದಲ್ಲಿ ಸಿಬಿಐ ಕೋರ್ಟ್ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿ ಶಾಸಕ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ಷರತ್ತುಬದ್ಧ ಜಾಮೀನು ನೀಡಿದೆ. ಹಲವು ಷರತ್ತುಗಳನ್ನ ವಿಧಿಸಿ ಜಾಮೀನು ನೀಡಿದೆ. 10 ಲಕ್ಷ ರೂಪಾಯಿ ಮೌಲ್ಯದ 2 ಶ್ಯೂರಿಟಿ ನೀಡಲು ಸೂಚಿಸಿದೆ. ಜೊತೆಗೆ ಭಾರತ ಬಿಟ್ಟು ಹೋಗಲು ಜನಾರ್ದನ ರೆಡ್ಡಿ ಅನುಮತಿ ಇಲ್ಲ.

ಪಾಸ್ಪೋರ್ಟ್ ವಶಕ್ಕೆ ಪಡೆಯಲು ಕೋರ್ಟ್ಸೂಚನೆ ನೀಡಿದೆ. ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.  ಸುಮಾರು 16 ವರ್ಷಗಳ ಹಿಂದೆ ಈ ಪ್ರಕರಣವನ್ನು ಸಿಬಿಐ ದಾಖಲಿಸಿತ್ತು. ಪ್ರಕರಣ ದಾಖಲಾಗುವ ಸಮಯದಲ್ಲಿ ಆಂಧ್ರಪ್ರದೇಶ ಗೃಹ ಸಚಿವೆಯಾಗಿದ್ದ ಸಬಿತಾ ಇಂದ್ರಾ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ ಕೃಪಾನಂದಂ ವಿರುದ್ಧದ ಆರೋಪಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿತ್ತು.

ಏನಿದು ಪ್ರಕರಣ?

ಆಂಧ್ರ ಪ್ರದೇಶದಲ್ಲಿ ವೈ.ಎಸ್ರಾಜಶೇಖರರೆಡ್ಡಿ ಹಾಗೂ ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಓಬಳಾಪುರಂ ಅಕ್ರಮ ಗಣಿಕಾರಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಆಂಧ್ರ-ಕರ್ನಾಟಕದ ಗಡಿಗೆ ಹೊಂದಿಕೊಂಡ ಓಬಳಾಪುರಂ ಬೆಟ್ಟದಲ್ಲಿ ಅದಿರಿನ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಗಣಿಗಾರಿಕೆ ಮಂಜೂರಾತಿ ವೇಳೆ ಇಲಾಖೆಗಳಿಂದ ಅಕ್ರಮವಾಗಿದೆ. ಅರಣ್ಯ ಇಲಾಖೆ, ಗಣಿಇಲಾಖೆಯಿಂದ ಅಕ್ರಮಆಗಿದೆ ಎಂದು ಆರೋಪಿಸಲಾಗಿತ್ತು.

ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 884 ಕೋಟಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಒಟ್ಟು 29 ಲಕ್ಷ ಟನ್ ಅದಿರು ಲೂಟಿ ಆಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐನ ವಿಶೇಷ ಕೋರ್ಟ್, ಶ್ರೀನಿವಾಸರೆಡ್ಡಿ, ಜನಾರ್ದನರೆಡ್ಡಿ, ಅಲಿಖಾನ್, ಸಬಿತಾ ಇಂದ್ರಾರೆಡ್ಡಿ, ಕೃಪಾನಂದ ದೋಷಿಗಳು ಎಂದು ಹೇಳಿತ್ತು. ಶಿಕ್ಷೆಯ ಪ್ರಮಾಣವಾಗಿ 5 ಅಪರಾಧಿಗಳಿಗೆ ತಲಾ 7 ವರ್ಷ ಜೈಲು ಶಿಕ್ಷೆ ಪ್ರಕಟ ಮಾಡಿತ್ತು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow