ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಐವರು ಉಪನ್ಯಾಸಕರ ವಿರುದ್ದ ದಾಖಲಾಯ್ತು ಎಫ್ಐಆರ್

ಸೆಪ್ಟೆಂಬರ್ 20, 2025 - 16:01
 0  19
ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ: ಐವರು ಉಪನ್ಯಾಸಕರ ವಿರುದ್ದ ದಾಖಲಾಯ್ತು ಎಫ್ಐಆರ್

ಬೆಂಗಳೂರು:- ಅತಿಥಿ ಉಪನ್ಯಾಸಕಿಗೆ ಲೈಂಗಿಕ ಕಿರುಕುಳ ಕೊಟ್ಟ ಆರೋಪದಡಿ ಐವರು ಉಪನ್ಯಾಸಕರ ವಿರುದ್ದ ಎಫ್ಐಆರ್ ದಾಖಲಾಗಿದೆ.

ಅತಿಥಿ ಉಪನ್ಯಾಸಕರಾದ ಸ್ವರೂಪ್ ಕುಮಾರ್, ರಾಮಾಂಜನೇಯ, ರಂಗಸ್ವಾಮಿ, ಜಗನ್ನಾಥ ಹಾಗೂ ಶಿವರಾಮ್ ವಿರುದ್ಧ ಜ್ಞಾನಭಾರತಿ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. ಎಫ್​​ಐಆರ್​​ ದಾಖಲು ಬೆನ್ನಲ್ಲೇ ಉಪನ್ಯಾಸಕರ ಹಲವು ವಿಡಿಯೋಗಳು ವೈರಲ್ ಆಗಿವೆ.

 ಅತಿಥಿ ಉಪನ್ಯಾಸಕ ರಾಮಾಂಜನೇಯ ಮದ್ಯ ಸೇವಿಸಿ ಬೆಂಗಳೂರು ವಿವಿ ಆವರಣದಲ್ಲಿ ಶರ್ಟ್ ಬಿಚ್ಚಿ ಡ್ಯಾನ್ಸ್​ ಮಾಡಿದ್ದಾರೆ. ಅಷ್ಟೇ ಅಲ್ಲದೆ ಅಂಬೇಡ್ಕರ್ ಜಯಂತಿ ಆಚರಣೆಯಲ್ಲಿ ವಿದ್ಯಾರ್ಥಿಯನ್ನ ಎತ್ತಿಕೊಂಡು ಡ್ಯಾನ್ಸ್ ಮಾಡಿರುವುದು ಮತ್ತು ಕಾರಿನಲ್ಲಿ ಕುಳಿತು ಮದ್ಯ ಸೇವಿಸಿರುವ ವಿಡಿಯೋಗಳು ವೈರಲ್ ಆಗಿವೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow