ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ; ಇಂದು ಶಿಕ್ಷೆ ಪ್ರಮಾಣ ಪ್ರಕಟ

ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಆಘಾತ ಎದುರಾಗಿದೆ. ಅತ್ಯಾಚಾರ ಆರೋಪ ಪ್ರಕರಣದ ವಿಚಾರಣೆ ಎದುರಿಸುತ್ತಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಇಂದು ಮಹತ್ವದ ತೀರ್ಪು ಪ್ರಕಟಿಸಿದೆ.ಕೋರ್ಟ್ ತನ್ನ ತೀರ್ಪಿನಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದಿದೆ.
ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ 4 ಕೇಸ್ಗಳ ಪೈಕಿ ಒಂದು ಪ್ರಕರಣದ ತೀರ್ಪು ಮಾತ್ರ ಪ್ರಕಟವಾಗಿದೆ. ಮನೆ ಕೆಲಸದಾಕೆ ನೀಡಿದ ಪ್ರಕರಣದಲ್ಲಿ ಆರೋಪ ಸಾಬೀತಾಗಿದ್ದು, ಈ ಪ್ರಕರಣದಲ್ಲಿ ಪ್ರಜ್ವಲ್ ದೋಷಿ ಎಂದು ಕೋರ್ಟ್ ಹೇಳಿದೆ. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ. ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಸಂಬಂಧ ಇನ್ನೂ ಮೂರು ಪ್ರಕರಣಗಳನ್ನು ಪ್ರಜ್ವಲ್ ರೇವಣ್ಣ ಎದುರಿಸುತ್ತಿದ್ದಾರೆ. ಇವು ವಿಚಾರಣೆಯ ಹಂತಗಳಲ್ಲಿವೆ.
ನಿಮ್ಮ ಪ್ರತಿಕ್ರಿಯೆ ಏನು?






