ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಬಿಗ್ ಬಾಸ್ ಕನ್ನಡ 12’ ಶೋಗೆ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್..!

ಜೂನ್ 30, 2025 - 18:00
 0  13
ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್: ‘ಬಿಗ್ ಬಾಸ್ ಕನ್ನಡ 12’ ಶೋಗೆ ಕಿಚ್ಚ ಸುದೀಪ್ ನಿರೂಪಣೆ ಫಿಕ್ಸ್..!

‘ಬಿಗ್ ಬಾಸ್’ ವಿವಿಧ ಭಾಷೆಗಳಲ್ಲಿ ಸಕ್ಸಸ್ ಆಗಿದೆ. ಕನ್ನಡದಲ್ಲಿ ಕೂಡ ಯಶಸ್ವಿಯಾಗಿ 11 ಸೀಸನ್​ಗಳು ಪೂರ್ಣಗೊಂಡಿವೆ. 11ನೇ ಸೀಸನ್​ನಲ್ಲಿ ಸಿಂಗರ್ ಹನುಮಂತ ಅವರು ಟ್ರೋಫಿ ಗೆದ್ದರು. ಈಗ 12ನೇ ಸೀಸನ್​​ಗೆ ನಿರೀಕ್ಷೆ ಹೆಚ್ಚಾಗಿದೆ. ‘ಬಿಗ್ ಬಾಸ್​ ಕನ್ನಡ ಸೀಸನ್ 12’ ಕಾರ್ಯಕ್ರಮವನ್ನು ಯಾರು ನಿರೂಪಣೆ ಮಾಡುತ್ತಾರೆ ಎಂಬ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಇದೆ. ಮತ್ತೆ ಸುದೀಪ್ ಅವರೇ ನಿರೂಪಣೆ ಮಾಡಬೇಕು ಎಂಬುದು ಅಭಿಮಾನಿಗಳ ಆಸೆ. ಇದೀಗ ಕನಸು ನನಸಾಗಿದೆ.

ಹೌದು ಸೀಸನ್ 12ಕ್ಕೆ ಕೆಲವೇ ತಿಂಗಳು ಬಾಕಿ ಇರೋವಾಗಲೇ ಬಿಗ್‌ಬಾಸ್ ತಂಡದ ಕಡೆಯಿಂದ ಹಾಗೂ ಕಿಚ್ಚ ಸುದೀಪ್ ಅವರಿಂದ ಬಿಗ್ ಅಪ್‌ಡೇಟ್ ಸಿಕ್ಕಿದೆ. ಹೌದು, ಕಿಚ್ಚ ಸುದೀಪ್ ಅವರೇ 12ನೇ ಸೀಸನ್‌ಗೂ ನಿರೂಪಣೆ ಮಾಡುವುದಾಗಿ ಸ್ಪಷ್ಟನೆ ಸಿಕ್ಕಿದೆ. ಬಿಗ್‌ಬಾಸ್ ಸಂಯೋಜಕರು ಹಾಗೂ ಕಲರ್ಸ್‌ ತಂಡ ಸುದ್ದಿಗೋಷ್ಠಿಯಲ್ಲಿ ಅಧಿಕೃತವಾಗಿ ಈ ನಿರ್ಧಾರವನ್ನು ಪ್ರಕಟಿಸಿದೆ.

11ನೇ ಸೀಸನ್‌ ಸಂದರ್ಭದಲ್ಲಿ ನಿರೂಪಕ ಕಿಚ್ಚ ಸುದೀಪ್ ವಿದಾಯ ಹೇಳಿದ್ದರು. ಇದಾದ ಬಳಿಕ ಸಾಕಷ್ಟು ಚರ್ಚೆಗಳು ಶುರುವಾಗಿದ್ವು, ಈ ಬಗ್ಗೆ ಕಿಚ್ಚ ಸುದೀಪ್ ಕೂಡಾ ಕಾದು ನೋಡಿ ಅನ್ನೋ ಅಭಿಪ್ರಾಯ ಹಂಚಿಕೊಂಡಿದ್ರು. ಇದೀಗ ಮತ್ತೆ 12ನೇ ಸೀಸನ್ ನಡೆಸಿಕೊಡುವ ಬಗ್ಗೆ ಗುಡ್‌ನ್ಯೂಸ್ ಕೊಟ್ಟಿದ್ದಾರೆ ಕಿಚ್ಚ. ಕಿಚ್ಚ ಸುದೀಪ್ ಇಲ್ಲದೇ ಬಿಗ್‌ಬಾಸ್ ನಿರೂಪಣೆಯನ್ನ ಊಹೆ ಮಾಡಿಕೊಳ್ಳುವುದಕ್ಕೂ ಆಗುವುದಿಲ್ಲ ಎನ್ನುವ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಹೀಗಾಗಿ ಕಿಚ್ಚ ಸುದೀಪ್ ಈ ಬಾರಿಯ ಬಿಗ್‌ಬಾಸ್ ಕಾರ್ಯಕ್ರಮವನ್ನ ಮುಂದುವರಿಸಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow