ಅಮೆರಿಕದಲ್ಲಿ ಶಿವಣ್ಣಗೆ ಇಂದು ಸರ್ಜರಿ: ಕರ್ನಾಟಕದಲ್ಲಿ ವಿಶೇಷ ಪೂಜೆ ಕೈಗೊಂಡ ಫ್ಯಾನ್ಸ್!

ಅನಾರೋಗ್ಯದ ಹಿನ್ನೆಲೆ ಅಮೇರಿಕಾಗೆ ತೆರಳಲಿರುವ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಇಂದು ಸರ್ಜರಿ ನಡೆಯಲಿದ್ದು, ಅಭಿಮಾನಿಗಳು ವಿಶೇಷ ಪೂಜೆ ಕೈಂಕರ್ಯಗಳನ್ನು ಕೈಗೊಂಡಿದ್ದಾರೆ.
ಸಿಲಿಕಾನ್ ಸಿಟಿಯ ಮಾಗಡಿ ರೋಡ್ನಲ್ಲಿನ ವಿರೇಶ್ ಥಿಯೇಟರ್ ಬಳಿ ಇರುವ ನಾಗಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶಿವಣ್ಣನ ಆರೋಗ್ಯ ಚೇತರಿಕೆಗಾಗಿ ಅಭಿಮಾನಿಗಳು ವಿಶೇಷ ಪೂಜೆ ನೆರವೇರಿಸಿದ್ದಾರೆ.
ಡಾ.ಶಿವರಾಜ್ಕುಮಾರ್ ಅವರು ಚಿಕಿತ್ಸೆಗೆಂದು ಅಮೆರಿಕಕ್ಕೆ ತೆರಳಿದ್ದು ಇಂದು ಶಸ್ತ್ರಚಿಕಿತ್ಸೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳು ಬೆಂಗಳೂರಿನಲ್ಲಿ ದೇವರ ಮೊರೆ ಹೋಗಿದ್ದು ಸರ್ಜರಿ ಯಶಸ್ವಿಯಾಗಿ, ಆರೋಗ್ಯವಾಗಿ ಶಿವಣ್ಣ ತವರಿಗೆ ಮರಳಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪ್ರಸ್ತುತ ಅಮೆರಿಕದಲ್ಲಿ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಡಾ.ಶಿವರಾಜ್ಕುಮಾರ್ ಅವರು ಇಂದು ಬೆಳಗ್ಗೆ 10 ಗಂಟೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಹೀಗಾಗಿಯೇ ಅಭಿಮಾನಿಗಳು ದೇವರ ಮೊರೆ ಹೋಗಿದ್ದಾರೆ.
ಆಸ್ಪತ್ರೆಯಲ್ಲಿ ಶಿವಣ್ಣಗೆ ಶಸ್ತ್ರಚಿಕಿತ್ಸೆಯ ಬಳಿಕ ಒಂದು ತಿಂಗಳು ಕಾಲ ಅಮೆರಿಕದಲ್ಲೇ ಇರಲಿದ್ದಾರೆ. ಜನವರಿ 26ಕ್ಕೆ ಭಾರತಕ್ಕೆ ಶಿವಣ್ಣ ವಾಪಸ್ ಆಗಲಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






