ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು: 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ

ನವೆಂಬರ್ 6, 2024 - 16:04
 0  12
ಅಮೆರಿಕಾ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವು: 47ನೇ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಆಯ್ಕೆ

 

ವಾಶಿಂಗ್ಟನ್: 2024ರ ಅಮೆರಿಕ ಅಧ್ಯಕ್ಷೀಯ ಚುನಾವಣೆಗೆ ಸ್ಪರ್ಧಿಸಿರುವ ಮಾಜಿ ಅಧ್ಯಕ್ಷ ಹಾಗು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಇದೀಗ ಬಂದಿರುವ ವರದಿಗಳಂತೆ 267 ಎಲೆಕ್ಟೋರಲ್ ಮತಗಳನ್ನು ಪಡೆದಿದ್ದು, ಅವರ ಪ್ರತಿಸ್ಪರ್ಧಿ ಹಾಗು ಹಾಲಿ ಉಪಾಧ್ಯಕ್ಷೆ, ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಕಮಲಾ ಹ್ಯಾರಿಸ್ 214 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.

ಹೌದು ರಿಪಬ್ಲಿಕನ್‌ ಪಕ್ಷದ ಅಭ್ಯರ್ಥಿ ಡೊನಾಲ್ಡ್‌ ಟ್ರಂಪ್ ಅವರು ಬರೋಬ್ಬರಿ 270ಕ್ಕೂ ಮತಗಳು ಪಡೆಯುವ ಮೂಲಕ ಗೆದ್ದು ಬೀಗಿದ್ದಾರೆ. ಈ ಮೂಲಕ ಅಮೆರಿಕಾದ 47ನೇ ಅಧ್ಯಕ್ಷರಾಗಿ ಟ್ರಂಪ್​​​ ಆಯ್ಕೆಯಾಗಿದ್ದಾರೆ.

ಈ ಚುನಾವಣೆಯಲ್ಲಿ ವಿಜೇತರನ್ನು ನಿರ್ಧರಿಸುವ ಎಲೆಕ್ಟೋರಲ್ ಕಾಲೇಜ್‌ (ಚುನಾಯಿತರ ಕೂಟ) ಸಂಖ್ಯೆಗಳಿಗೆ ಸಂಬಂಧಿಸಿದಂತೆ, ಟ್ರಂಪ್ 267 ರೊಂದಿಗೆ ಮುನ್ನಡೆಯಲ್ಲಿದ್ದು, ಪ್ರಚಂಡ ಗೆಲುವಿನ ಅಂಚಿನಲ್ಲಿದ್ದಾರೆ. ಆದರೆ ಡೆಮಾಕ್ರಟಿಕ್ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ 214 ಮತಗಳೊಂದಿಗೆ ಹಿನ್ನಡೆ ಅನುಭವಿಸಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ನಿರ್ಣಾಯಕವೇ ಆಗಿರುವ 7 ಸ್ವಿಂಗ್‌ ರಾಜ್ಯಗಳ ಪೈಕಿ ನಾಲ್ಕರಲ್ಲಿ ಟ್ರಂಪ್‌ ಜಯಭೇರಿ ಬಾರಿಸಿದ್ದಾರೆ.

ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ ಪೆನ್ಸಿಲ್ವೇನಿಯಾ, ಜಾರ್ಜಿಯಾ, ನಾರ್ತ್ ಕೆರೊಲಿನಾ, ಟೆಕ್ಸಾಸ್, ಫ್ಲೋರಿಡಾ, ಇಂಡಿಯಾನಾ, ಕೆಂಟುಕಿ ಒಳಗೊಂಡಂತೆ 30 ಕ್ಕೂ ಹೆಚ್ಚು ರಾಜ್ಯಗಳಲ್ಲಿ ಗೆಲುವು ದಾಖಲಿಸಿದ್ದರೆ, ಡೆಮಾಕ್ರಟಿಕ್‌ ಅಭ್ಯರ್ಥಿ ಕಮಲಾ ಹ್ಯಾರಿಸ್ ಕೇವಲ 20 ರಾಜ್ಯಗಳಲ್ಲಿ ಜಯಗಳಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow