ಅರಿಶಿನ-ಶುಂಠಿ ಒಟ್ಟಿಗೆ ತಿಂದರೆ ಆಗುವ ಪ್ರಯೋಜನಗಳೇನು ಗೊತ್ತಾ..?

ಮೇ 25, 2025 - 07:01
 0  7
ಅರಿಶಿನ-ಶುಂಠಿ ಒಟ್ಟಿಗೆ ತಿಂದರೆ ಆಗುವ ಪ್ರಯೋಜನಗಳೇನು ಗೊತ್ತಾ..?

ಅರಿಶಿನ ಮತ್ತು ಶುಂಠಿಯನ್ನು ಒಟ್ಟಿಗೆ ಸೇವಿಸುವುದರಿಂದ ಉಂಟಾಗುವ ಪ್ರಯೋಜನಗಳು, ಅಡ್ಡಪರಿಣಾಮಗಳ ಬಗ್ಗೆ ಹೆಚ್ಚಿನ ಸಂಶೋಧನೆ ನಡೆದಿಲ್ಲವಾದರೂ, ಕೆಲವು ಅಧ್ಯಯನಗಳು ಭರವಸೆ ಇಡುವಂತಹ ಫಲಿತಾಂಶಗಳನ್ನು ಕಂಡುಕೊಂಡಿವೆ. ಅರಿಶಿನ ಮತ್ತು ಶುಂಠಿ ಎರಡೂ ದೇಹದ ಉತ್ಕರ್ಷಣ ನಿರೋಧಕ ಮತ್ತು ಉರಿಯೂತಕ್ಕೆ ಬಹಳ ಪ್ರಯೋಜನಕಾರಿಯಂತೆ. ಆದ್ದರಿಂದ ಅವುಗಳನ್ನು ಸಂಯೋಜಿಸಿ ತೆಗೆದುಕೊಂಡಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಮತ್ತು ದೇಹದಲ್ಲಿ ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಸಹಾಯ ಮಾಡುತ್ತದೆ ಎಂದು ತಿಳಿದು ಬಂದಿದೆ.

 ಕ್ಯಾನ್ಸರ್ ತಡೆಗಟ್ಟುವಿಕೆ:

ಹೆಚ್ಚಿನ ಸಂಶೋಧನೆಗಳಿಂದ ತಿಳಿದುಬಂದ ಪ್ರಕಾರ ಕರ್ಕ್ಯುಮಿನ್ ಮತ್ತು ಜಿಂಜರಾಲ್ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ.

ಮೆದುಳಿನ ಆರೋಗ್ಯ:

ಇವೆರಡು ಮೆದುಳಿನ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ವಯಸ್ಸಿಗೆ ಸಂಬಂಧಿಸಿದ ಅರಿವಿನ ಸಾಮರ್ಥ್ಯ ಕಡಿಮೆಯಾಗದಿರಲು, ಮೆದುಳಿನಲ್ಲಿ ಉರಿಯೂತವನ್ನು ಕಡಿಮೆ ಮಾಡಲು ಮತ್ತು ಮನಸ್ಥಿತಿ ಮತ್ತು ಸ್ಮರಣ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತವೆ.

ಹೃದಯರಕ್ತನಾಳದ ಆರೋಗ್ಯ ಕಾಪಾಡುತ್ತದೆ:

ಅರಿಶಿನ ಮತ್ತು ಶುಂಠಿಯು ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಹೃದಯರಕ್ತನಾಳದ ಆರೋಗ್ಯಕ್ಕೆ ಒಳ್ಳೆಯದು ಎಂದು ಅಧ್ಯಯನಗಳಿಂದ ತಿಳಿದು ಬಂದಿದೆ. ಹೃದ್ರೋಗಕ್ಕೆ ಅಪಾಯಕಾರಿ ಅಂಶಗಳಾದ ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತವೆ. ಹೆಚ್ಚುವರಿಯಾಗಿ, ಶುಂಠಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುವುದರ ಜೊತೆಗೆ ರಕ್ತ ಪರಿಚಲನೆಯನ್ನು ಸುಧಾರಿತ್ತದೆ.

ಜೀರ್ಣ ಕ್ರಿಯೆಯನ್ನು ಹೆಚ್ಚಿಸುತ್ತದೆ:

ಶುಂಠಿ ಮತ್ತು ಅರಿಶಿನವು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಅರಿಶಿನವು ಅಜೀರ್ಣ ಮತ್ತು ಉಬ್ಬರದ ರೋಗಲಕ್ಷಣಗಳನ್ನು ನಿವಾರಿಸಲು ಸಹಾಯ ಮಾಡುತ್ತದೆ.

ನೋವು ನಿವಾರಕ:

ಇವು ನೈಸರ್ಗಿಕ ನೋವು ನಿವಾರಕವಾಗಿದೆ. ಸಂಯುಕ್ತಗಳು ಆಸ್ಟಿಯೋ ಆರ್ಥ್ರೈಟಿಸ್, ರುಮಟಾಯ್ಡ್ ಸಂಧಿವಾತ ಮತ್ತು ಸ್ನಾಯು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅಧ್ಯಯನಗಳು ಹೇಳುತ್ತದೆ.

ಉರಿಯೂತ ನಿವಾರಕವಾಗಿದೆ:

ಅರಿಶಿನ ಮತ್ತು ಶುಂಠಿ ಎರಡೂ ಪ್ರಬಲ ಉರಿಯೂತ ನಿವಾರಣಾ ಗುಣಲಕ್ಷಣಗಳನ್ನು ಹೊಂದಿದ್ದು, ಅರಿಶಿನದಲ್ಲಿರುವ ಕರ್ಕ್ಯುಮಿನ್ ಮತ್ತು ಶುಂಠಿಯಲ್ಲಿ ಕಂಡುಬರುವ ಜಿಂಜರಾಲ್ ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಸಂಧಿವಾತ ಮತ್ತು ಕರುಳಿನ ಉರಿಯೂತವನ್ನು ನಿವಾರಿಸುತ್ತದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow