ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ: ಗಾಯಾಳುಗಳ ಆರೋಗ್ಯ ವಿಚಾರಣೆ

ಜೂನ್ 13, 2025 - 10:27
 0  10
ಅಹಮದಾಬಾದ್ ಆಸ್ಪತ್ರೆಗೆ ಪ್ರಧಾನಿ ಮೋದಿ ಭೇಟಿ: ಗಾಯಾಳುಗಳ ಆರೋಗ್ಯ ವಿಚಾರಣೆ

ನವದೆಹಲಿ: ಅಹ್ಮದಾಬಾದ್ನಿಂದ ಲಂಡನ್ಗೆ ಹೊರಟಿದ್ದ ಏರ್ಇಂಡಿಯಾದ ಬೋಯಿಂಗ್-787 ಡ್ರೀಮ್ಲೈನರ್ ವಿಮಾನ ಘೋರ ದುರಂತಕ್ಕೆ ಒಳಗಾಗಿದೆ. ಮಧ್ಯಾಹ್ನ 1.38ಕ್ಕೆ ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಮಘಾನಿನಗರ ಪ್ರದೇಶದ ಬಿಜೆ ಎಂಬಿಬಿಎಸ್ ಹಾಸ್ಟೆಲ್​​ ಮೇಲೆ ಬಂದು ಅಪ್ಪಳಿಸಿತು. ಪರಿಣಾಮ ವಿಮಾನದಲ್ಲಿದ್ದ 241 ಪ್ರಯಾಣಿಕರು ಹಾಗೂ ಹಾಸ್ಟೆಲ್​​ನಲ್ಲಿದ್ದ 24 ಭಾವಿ ವೈದ್ಯರು ಜೀವಬಿಟ್ಟಿದ್ದಾರೆ. ಇನ್ನು, ವಿಮಾನದಲ್ಲಿದ್ದ ಓರ್ವ ಪ್ರಯಾಣಿಕ ಜಿಗಿದು ತಮ್ಮ ಪ್ರಾಣವನ್ನು ಉಳಿಸಿಕೊಂಡಿದ್ದಾರೆ.

ಇನ್ನೂ ಪ್ರಧಾನಿಯವರು ಸರ್ದಾರ್ ವಲ್ಲಭಭಾಯಿ ಪಟೇಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಅಲ್ಲಿಂದ ಮೇಘನಿನಗರ ಪ್ರದೇಶದಲ್ಲಿ ಸಂಭವಿಸಿದ ಅಪಘಾತ ಸ್ಥಳಕ್ಕೆ ನೇರವಾಗಿ ಕಾರಿನಲ್ಲೇ ತೆರಳಿದರು. ಇಲ್ಲಿ ಅಧಿಕಾರಿಗಳ ಬಳಿ ಘಟನೆ ಬಗ್ಗೆ ಮಾಹಿತಿ ಪಡೆದ ಮೋದಿ ಬಳಿಕ ಅಹಮದಾಬಾದ್ ಸಾರ್ವಜನಿಕ ಆಸ್ಪತ್ರೆಗೆ ತೆರಳಿದರು. ಅಲ್ಲಿ ವಿಮಾನ ದುರಂತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಅಲ್ಲಿಂದ ಏರ್ಪೋರ್ಟ್ನತ್ತ ತೆರಳಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow