ಆಂಬುಲೆನ್ಸ್‌ಗೆ ದಾರಿ ಬಿಡದೇ ಪುಂಡಾಟ: ಬೈಕ್ ಸವಾರನ ಹೆಡೆಮುರಿ ಕಟ್ಟಿದ ಬಂಟ್ವಾಳ ಪೊಲೀಸ್

ಅಕ್ಟೋಬರ್ 31, 2025 - 21:10
 0  17
ಆಂಬುಲೆನ್ಸ್‌ಗೆ ದಾರಿ ಬಿಡದೇ ಪುಂಡಾಟ: ಬೈಕ್ ಸವಾರನ ಹೆಡೆಮುರಿ ಕಟ್ಟಿದ  ಬಂಟ್ವಾಳ ಪೊಲೀಸ್
ಮಂಗಳೂರು: ಬಂಟ್ವಾಳ ಪೊಲೀಸರಿಂದ ಆಂಬುಲೆನ್ಸ್‌ಗೆ ದಾರಿ ಬಿಡದೇ ಪುಂಡಾಟ ನಡೆಸಿದ್ದ ಬೈಕ್ ಸವಾರನನ್ನು ಬಂಧಿಸಲಾಗಿದೆ. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ನಡೆದಿದೆ.
 
ಬಂಧಿತನನ್ನು ಪುತ್ತೂರಿನ ಬೆಟ್ಟಂಪಾಡಿ ಗ್ರಾಮದ ಮಹಮ್ಮದ್ ಮನ್ಸೂರು (38) ಎಂದು ಗುರುತಿಸಲಾಗಿದೆ. ಗುರುವಾರ ಬಿಸ್ಲೆ ಘಾಟ್ ಬಳಿ ನಡೆದ ಅಪಘಾತದಲ್ಲಿ ಗಾಯಗೊಂಡವರನ್ನು ಆಂಬುಲೆನ್ಸ್‌ನಲ್ಲಿ ಕರೆದೊಯ್ಯುತ್ತಿದ್ದಾಗ, ಸವಾರನು ಸುಮಾರು ಮೂರು ಕಿಲೋಮೀಟರ್‌ಗಳವರೆಗೆ ದಾರಿ ಬಿಡದೇ ಅಡ್ಡಗಟ್ಟಿದ್ದಾನೆ.
 
ಈ ಘಟನೆಗೆ ಸಂಬಂಧಿಸಿದ ವಿಡಿಯೋವನ್ನು ಆಂಬುಲೆನ್ಸ್ ಸಿಬ್ಬಂದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದರು. ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದ್ದಂತೆ, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮನ್ಸೂರನ್ನು ಬಂಧಿಸಿ ಬೈಕ್ ವಶಕ್ಕೆ ಪಡೆದಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow