ಆರೋಗ್ಯದಲ್ಲಿ ಏರುಪೇರು: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು!

ಡಿಸೆಂಬರ್ 14, 2024 - 12:42
 0  14
ಆರೋಗ್ಯದಲ್ಲಿ ಏರುಪೇರು: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು!

ನವದೆಹಲಿ:- ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆ ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. 

ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿರುವ ಅಡ್ವಾಣಿ ಅವರನ್ನು ಇದು ಜುಲೈ ನಂತರ ಅವರ ನಾಲ್ಕನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದೆ.

ನವೆಂಬರ್ 8, 1927 ರಂದು ಕರಾಚಿಯಲ್ಲಿ ಜನಿಸಿದ ಶ್ರೀ ಅಡ್ವಾಣಿ ಅವರು 1942 ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಗೆ ಸೇರಿದರು.ಬಿಜೆಪಿಯ ಪ್ರಮುಖ ವಾಸ್ತುಶಿಲ್ಪಿ ಎಂದು ಕೂಡ ಕರೆಯಾಗುತ್ತದೆ. ಸುದೀರ್ಘ ಸೇವೆ ಸಲ್ಲಿಸಿದ ಅವರು ರಾಷ್ಟ್ರೀಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದರು.ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಿದರು, ಗೃಹ ಸಚಿವರಾಗಿ ಮತ್ತು ನಂತರ 1999 ಮತ್ತು 2004ರಲ್ಲಿ ಉಪಪ್ರಧಾನಿಯಾಗಿ ಕೂಡ ಕೆಲಸ ಮಾಡಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow