ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ಹಿಟ್ ಮ್ಯಾನ್ ರೋಹಿತ್ ಶರ್ಮಾ ಔಟ್..!

ಟೀಂ ಇಂಡಿಯಾಗೆ ದೊಡ್ಡ ಆಘಾತ ಎದುರಾಗಿದ್ದು, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಿಂದ ರೋಹಿತ್ ಶರ್ಮಾ ಔಟ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ನವೆಂಬರ್ 22 ರಿಂದ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಕ್ಯಾಪ್ಟನ್ ರೋಹಿತ್ ಶರ್ಮಾ ಆಡೋದು ಡೌಟ್ ಎನ್ನಲಾಗುತ್ತಿದೆ
ರೋಹಿತ್ ಮೊದಲ ಟೆಸ್ಟ್ನಿಂದ ಹೊರಗುಳಿಯುವ ಸಾಧ್ಯತೆ ಇದೆ. ಈ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಬಂದಿಲ್ಲ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ. ರೋಹಿತ್ ಇರುತ್ತಾರೋ? ಇಲ್ಲವೋ ಅನ್ನೋದು ಸಂದರ್ಭಗಳ ಮೇಲೆ ಅವಲಂಬಿತವಾಗಿರುತ್ತದೆ. ಈ ಸಂಬಂಧ ರೋಹಿತ್, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಮಾಹಿತಿ ನೀಡಿದ್ದಾರೆ. ಒಂದು ಅಥವಾ ಎರಡು ಟೆಸ್ಟ್ ಪಂದ್ಯಗಳಿಂದ ರೋಹಿತ್ ಹೊರಗುಳಿಯಬಹುದು. ಇನ್ನು ಎಲ್ಲವೂ ಅಂದುಕೊಂಡಂತೆ ನಡೆದರೆ ರೋಹಿತ್ ಆಸ್ಟ್ರೇಲಿಯಾ ವಿರುದ್ಧದ ಎಲ್ಲಾ ಪಂದ್ಯಗಳನ್ನು ಆಡಲಿದ್ದಾರೆ ಎನ್ನಲಾಗಿದೆ.
ಟೀಂ ಇಂಡಿಯಾ ನವೆಂಬರ್ 22 ರಿಂದ ಜನವರಿ 3 ರವರೆಗೆ ಆಸ್ಟ್ರೇಲಿಯಾ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಬೇಕಾಗಿದೆ. ಅದಕ್ಕೂ ಮುನ್ನ ನ್ಯೂಜಿಲೆಂಡ್ ವಿರುದ್ಧ ರೋಹಿತ್ ಮೈದಾನಕ್ಕಿಳಿಯಲಿದ್ದಾರೆ.
ವೆಬ್ ಡೆಸ್ಕ್
ಫೋಕಸ್ ಕರ್ನಾಟಕ
ನಿಮ್ಮ ಪ್ರತಿಕ್ರಿಯೆ ಏನು?






