ಇಂದು ಪಂಜಾಬ್-ಮುಂಬೈ ಹೈವೋಲ್ಟೋಜ್ ಮ್ಯಾಚ್: ಕ್ವಾಲಿಫೈಯರ್-2 ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ!

ಜೂನ್ 1, 2025 - 12:19
 0  9
ಇಂದು ಪಂಜಾಬ್-ಮುಂಬೈ ಹೈವೋಲ್ಟೋಜ್ ಮ್ಯಾಚ್: ಕ್ವಾಲಿಫೈಯರ್-2 ಪಂದ್ಯಕ್ಕೆ ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11 ಹೀಗಿದೆ!

ರನ್‌ ಮಳೆ ಸುರಿದ ಈ ಬಾರಿಯ ಎಲಿಮಿನೇಟರ್‌ನಲ್ಲಿ ಗುಜರಾತ್‌ ಟೈಟಾನ್ಸ್‌ನ 20 ರನ್‌ಗಳಿಂದ ಬಗ್ಗುಬಡಿದ 5 ಬಾರಿ ಚಾಂಪಿಯನ್‌ ಮುಂಬೈ ಇಂಡಿಯನ್ಸ್‌, ಮತ್ತೊಂದು ಕಪ್‌ ಗೆಲುವಿನ ಆಸೆಯನ್ನು ಜೀವಂತವಾಗಿರಿಸಿಕೊಂಡಿದೆ. ತಂಡ 18ನೇ ಆವೃತ್ತಿ ಐಪಿಎಲ್‌ನಲ್ಲಿ ಕ್ವಾಲಿಫೈಯರ್‌-2 ಪ್ರವೇಶಿಸಿದ್ದು, ಟ್ರೋಫಿ ಗೆಲ್ಲಲು ಇನ್ನೆರಡೇ ಮೆಟ್ಟಿಲು ಹತ್ತಬೇಕಿದೆ.

2025ರ ಐಪಿಎಲ್ ಮುಕ್ತಾಯದ ಹಂತಕ್ಕೆ ಬಂದಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರವೇಶಿಸಿದೆ. 

ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಕ್ವಾಲಿಫೈಯರ್-1 ಪಂದ್ಯದಲ್ಲಿ ಸೋಲಿನ ನಿರಾಶೆಯಿಂದ ಕಂಗೆಟ್ಟಿರುವ ಪಂಜಾಬ್ ಕಿಂಗ್ಸ್ (ತಂಡ ಮತ್ತೆ ಗೆಲುವಿನ ಲಯಕ್ಕೆ ಮರಳುವ ಇರಾದೆಯಲ್ಲಿದೆ. ಮತ್ತೊಂದೆಡೆ, ಎಲಿಮಿನೇಟರ್‌ನಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಸೋಲಿಸಿದ ಮುಂಬೈ ಇಂಡಿಯನ್ಸ್ ಕ್ವಾಲಿಫೈಯರ್ 2 ಗೆ ಸಜ್ಜಾಗಿದೆ. ಹೀಗಾಗಿ ಪಂಜಾಬ್ ಮತ್ತು ಮುಂಬೈ ಉಭಯ ತಂಡಗಳು ಫೈನಲ್ ತಲುಪಲು ಒಂದು ಹೆಜ್ಜೆ ದೂರದಲ್ಲಿದ್ದು, ಇಂದಿನ ಪಂದ್ಯವನ್ನು ಗೆಲ್ಲುವ ತಂಡವೂ ಬರುವ ಮಂಗಳವಾರ ಆರ್​ಸಿಬಿ ವಿರುದ್ಧ ಪ್ರಶಸ್ತಿಗಾಗಿ ಸೆಣಸಾಡಲಿದೆ.

ಗುಂಪು ಹಂತದಲ್ಲಿ ಅಗ್ರಸ್ಥಾನ ಪಡೆದ ಪಂಜಾಬ್‌ಗೆ ಫೈನಲ್ ತಲುಪಲು ಎರಡನೇ ಅವಕಾಶ ಸಿಕ್ಕಿದೆ. ಇದು ಪಂಜಾಬ್ ಮತ್ತು ಮುಂಬೈ ಎರಡಕ್ಕೂ ಸೆಮಿಫೈನಲ್ ಪಂದ್ಯದಂತೆ. ಗುಜರಾತ್ ಟೈಟನ್ಸ್ ವಿರುದ್ಧದ ಎಲಿಮಿನೇಟರ್ ಪಂದ್ಯದಲ್ಲಿ ಮುಂಬೈ ತಂಡವು ಪ್ರತಿಯೊಂದು ವಿಭಾಗದಲ್ಲೂ ಉತ್ತಮ ಪ್ರದರ್ಶನ ನೀಡಿದ್ದರೂ, ಪ್ರಶಸ್ತಿ ಗೆಲ್ಲಲು ಪಂಜಾಬ್ ತಂಡವನ್ನು ಸೋಲಿಸಲೇಬೇಕು. ಮತ್ತೊಂದೆಡೆ, ಮುಂಬೈ ತಂಡವನ್ನು ಸೋಲಿಸುವುದು ಪಂಜಾಬ್‌ಗೆ ಕಠಿಣ ಸವಾಲಾಗಿದೆ.

ಎರಡೂ ತಂಡಗಳ ಸಂಭಾವ್ಯ ಪ್ಲೇಯಿಂಗ್-11
ಪಂಜಾಬ್ ಕಿಂಗ್ಸ್: ಪ್ರಿಯಾಂಶ್ ಆರ್ಯ, ಪ್ರಭ್ಸಿಮ್ರಾನ್ ಸಿಂಗ್, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಾಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಅಜ್ಮತುಲ್ಲಾ ಒಮರ್ಜೈ, ಹರ್ಪ್ರೀತ್ ಬ್ರಾರ್, ಕೈಲ್ ಜೇಮಿಸನ್, ಅರ್ಶ್ದೀಪ್ ಸಿಂಗ್.

ಮುಂಬೈ ಇಂಡಿಯನ್ಸ್: ಜಾನಿ ಬೈರ್ಸ್ಟೋವ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ರಾಜ್ ಬಾವಾ, ಟ್ರೆಂಟ್ ಬೌಲ್ಟ್, ಜಸ್ಪ್ರೀತ್ ಬುಮ್ರಾ, ರಿಚರ್ಡ್ ಗ್ಲೀಸನ್.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow