ಇಂದು ಪಾಕಿಸ್ತಾನದ ಗಡಿಯಲ್ಲಿನ 4 ರಾಜ್ಯಗಳಲ್ಲಿ ನಾಗರಿಕ ರಕ್ಷಣಾ ಅಣಕು ಕವಾಯತು..!

ಮೇ 29, 2025 - 10:46
 0  10
ಇಂದು ಪಾಕಿಸ್ತಾನದ ಗಡಿಯಲ್ಲಿನ 4 ರಾಜ್ಯಗಳಲ್ಲಿ ನಾಗರಿಕ ರಕ್ಷಣಾ ಅಣಕು ಕವಾಯತು..!

ನವದೆಹಲಿ: ಗುಜರಾತ್, ಪಂಜಾಬ್, ರಾಜಸ್ಥಾನ, ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಸಂಜೆ ಮಾಕ್ಡ್ರಿಲ್ ನಡೆಯಲಿದೆ. ಜನರಿಗೆ ಯುದ್ಧ ಸಂದರ್ಭದ ಬಗ್ಗೆ ಜಾಗೃತಿ ಮೂಡಿಸಲು ಮಾಕ್ಡ್ರಿಲ್ನಡೆಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಯುದ್ಧದ (War) ಸಂದರ್ಭದಲ್ಲಿ ಜನರು ತಮ್ಮನ್ನು ತಾವು ಹೇಗೆ ರಕ್ಷಿಸಿಕೊಳ್ಳಬೇಕು ಎನ್ನುವುದರ ಬಗ್ಗೆ ಮಾಕ್ ಡ್ರಿಲ್ ವೇಳೆ ಹೇಳಿಕೊಡಲಾಗುತ್ತದೆ. ವಿದ್ಯಾರ್ಥಿಗಳು, ನಾಗರಿಕರಿಗೆ ಸೇನೆ, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬಗ್ಗೆ ಪ್ರಾತ್ಯಕ್ಷಿಕೆ ನೀಡಿ ಮಾಹಿತಿ ನೀಡಲಿದ್ದಾರೆ.

ಒಂದು ದೇಶ ಯುದ್ಧಕ್ಕೆ ಸಿದ್ಧಗೊಳ್ಳುತ್ತಿದ್ದಾಗ ಮಾಕ್ಡ್ರಿಲ್ಮಾಡಲು ಕರೆ ನೀಡುತ್ತದೆ. 1971ರಲ್ಲಿ ಭಾರತ-ಪಾಕ್ ಯುದ್ಧ ನಡೆಯುವ ಮೊದಲು ರಕ್ಷಣಾ ಮಾಕ್ ಡ್ರಿಲ್ ನಡೆದಿತ್ತು. ಇತ್ತೀಚೆಗೆ ಪಂಜಾಬ್ ಫಿರೋಜ್ಪುರ್ ಕಂಟೋನ್ಮೆಂಟ್ನಲ್ಲಿ ರಾತ್ರಿ 9 ರಿಂದ 9:30ರವರೆಗೆ ವಿದ್ಯುತ್ದೀಪ ಆರಿಸಿ ಮಾಕ್ ಡ್ರಿಲ್ ನಡೆದಿತ್ತು. ಇದರ ಬೆನ್ನಲ್ಲೇ ಎಲ್ಲ ರಾಜ್ಯಗಳಿಗೆ ಮಾಕ್ ಡ್ರಿಲ್ಗೆ ಕೇಂದ್ರ ಗೃಹ ಸಚಿವಾಲಯ ಸೂಚನೆ ನೀಡಿತ್ತು. ಅದರಂತೆ ಬಹುತೇಕ ರಾಜ್ಯಗಳಲ್ಲಿ ಮಾಕ್ಡ್ರಿಲ್ ನಡೆದಿತ್ತು.

ಮಾಕ್ ಡ್ರಿಲ್ ಎಂದರೇನು?
ಮಾಕ್ ಡ್ರಿಲ್ ವೇಳೆ, ಒಂದು ಕಾಲ್ಪನಿಕ ತುರ್ತು ಪರಿಸ್ಥಿತಿಯ ಸೃಷ್ಟಿ ಮಾಡಲಾಗುತ್ತದೆ. ಸರ್ಕಾರ, ಭದ್ರತಾ ಸಿಬ್ಬಂದಿ, ಸಾರ್ವಜನಿಕರ ಸಿದ್ಧತೆ ಪರೀಕ್ಷಿಸುವ ಅಭ್ಯಾಸ ಇದಾಗಿದ್ದು ನೈಜ ಘಟನೆಯಂತೆಯೇ ನಡೆಯುತ್ತದೆ. ಯಾವುದೇ ಹಾನಿಯಾಗದಂತೆ ಎಚ್ಚರಿಕೆ ವಹಿಸಲಾಗುತ್ತದೆ.

ಸಂಕಷ್ಟದ ಸನ್ನಿವೇಶಗಳನ್ನು ಅಣಕುಪ್ರದರ್ಶನ ಮಾಡಿ ಅಭ್ಯಾಸ ಮಾಡಲಾಗುತ್ತದೆ. ಸಾರ್ವಜನಿಕ ಸ್ಥಳಗಳಲ್ಲಿ ಭದ್ರತೆ, ಜನರ ರಕ್ಷಣೆಯ ಸಾಮರ್ಥ್ಯ ಬಲಪಡಿಸುವ ಉದ್ದೇಶದ ಜೊತೆಗೆ ಶತ್ರು ದಾಳಿ ವೇಳೆ ಸಾರ್ವಜನಿಕ ಸುರಕ್ಷತೆಯನ್ನು ಖಾತ್ರಿ ಪಡಿಸಲು ಅಗತ್ಯ ಸಿದ್ಧತೆ ಮಾಡಲು ಅಭ್ಯಾಸ ಮಾಡಲಾಗುತ್ತದೆ. ಯಾವುದೇ ತುರ್ತು ಸಂದರ್ಭದಲ್ಲಿ ರಾಜ್ಯ ಸರ್ಕಾರಗಳು, ಪೊಲೀಸ್, ಆರೋಗ್ಯ ಇಲಾಖೆ ಮತ್ತು ಇತರ ಸಂಸ್ಥೆಗಳ ಸಮನ್ವಯ ಬೇಕಾಗುತ್ತದೆ. ಜನರಲ್ಲಿ ತುರ್ತು ಸನ್ನಿವೇಶದ ಬಗ್ಗೆ ಜಾಗೃತಿ ಮೂಡಿಸಿ ಸುರಕ್ಷಿತವಾಗಿರಲು ತರಬೇತಿ ನೀಡಲಾಗುತ್ತದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow