ಇಂದು ಪುನೀತ್ ರಾಜ್ಕುಮಾರ್ 50ನೇ ಹುಟ್ಟುಹಬ್ಬ: ನಟನ ಸಮಾಧಿ ಬಳಿ ನೆರೆದ ಸಾವಿರಾರು ಅಭಿಮಾನಿಗಳು

ಬೆಂಗಳೂರು: ಪುನೀತ್ ರಾಜ್ಕುಮಾರ್ 50ನೇ ವರ್ಷದ ಜನ್ಮದಿನ ಸಂಭ್ರಮವಾಗಿದ್ದು, ಎಂದಿಗೂ ಕಮ್ಮಿ ಆಗಲ್ಲ ಅಪ್ಪು ಮೇಲಿನ ಅಭಿಮಾನ ಬದುಕಿದ್ದರೆ ಇವತ್ತು ತಮ್ಮ 50 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಅವರ ಸಮಾಧಿಯಿರುವ ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳು ಬೆಳಗಿನ ಜಾವ 3 ಗಂಟೆಯಿಂದ ನೆರೆಯಲಾರಭಿಸಿದ್ದಾರೆ.
ಹೌದು ರಾಜ್ಯಾದ್ಯಂತ ಅಭಿಮಾನಿಗಳು ನಟ ಪುನೀತ್ ರಾಜ್ಕುಮಾರ್ ಜನ್ಮದಿನವನ್ನು ಆಚರಿಸುತ್ತಿದ್ದಾರೆ. 50ನೇ ವರ್ಷದ ಬರ್ತ್ಡೇ ಆದ್ದರಿಂದ ಈ ಬಾರಿ ಸ್ಪೆಷಲ್ ಆಗಿದೆ. ಸಮಾಧಿ ಸ್ಥಳಕ್ಕೆ ಅಭಿಮಾನಿಗಳು, ಕುಟುಂಬದವರು ಹಾಗೂ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ.
ಅವರ ಸಮಾಧಿಯಿರುವ ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳು ಬೆಳಗಿನ ಜಾವ 3 ಗಂಟೆಯಿಂದ ನೆರೆಯಲಾರಭಿಸಿದ್ದಾರೆ. ಸ್ಟುಡಿಯೋಗೆ ಬರುವವರ ಸಂಖ್ಯೆ ಪ್ರತಿನಿಮಿಷ ಹೆಚ್ಚುತ್ತಿದೆ ಮತ್ತು ಇಲ್ಲಿ ಅದಾಗಲೇ ಹಬ್ಬದ ವಾತಾವರಣ ಸೃಷ್ಟಿಯಾಗಿದೆ. ಪುನೀತ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
ನಿಮ್ಮ ಪ್ರತಿಕ್ರಿಯೆ ಏನು?






