ಇದು ಎಂಥಾ ಗೋಳು ಮರ್ರೆ: ಬೆಂಗ್ಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಶವಗಳಿಗೂ ರಕ್ಷಣೆ ಇಲ್ಲ!

ಬೆಂಗಳೂರು:- ಇದು ಸಿಲಿಕಾನ್ ಸಿಟಿಯ ಅವ್ಯವಸ್ಥೆನಾ ಅಥವಾ ಇಲ್ಲಿನ ಸಿಬ್ಬಂದಿಗಳ ಬೇಜವಾಬ್ದಾರಿನಾ ಏನು ಅಂಥ ಹೇಳೋದು ಮರ್ರೆ.
ಎಸ್, ನಗರದ ಪ್ರತಿಷ್ಠಿತ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದ ಮೃತದೇಹದ ಭಾಗಗಳನ್ನು ಇಲಿಗಳು ಕಚ್ಚಿ ತಿನ್ನುತ್ತಿದ್ದಾವೆ. ಸೋಮವಾರ ಸಂಜೆ ಸಾವನ್ನಪ್ಪಿದ್ದ ವ್ಯಕ್ಯಿಯ ಮೃತದೇಹವನ್ನ ನಗರದ ಕೆಜಿ ಹಳ್ಳಿಯ ಅಂಬೇಡ್ಕರ್ ಮೆಡಿಕಲ್ ಕಾಲೇಜಿನ ಶವಾಗಾರದಲ್ಲಿ ಇಡಲಾಗಿತ್ತು. ಕೋಲ್ಡ್ ಸ್ಟೋರೆಜ್‍ನಲ್ಲಿ ಇಟ್ಟಿದ್ರೂ ಮೂಗು, ಕಣ್ಣಿನ ರೆಪ್ಪೆಯನ್ನು ಇಲಿಗಳು ತಿಂದಿವೆ.
37 ವರ್ಷದ ರಂಗಸ್ವಾಮಿ ಹರ್ನಿಯಾ ಸಮಸ್ಯೆಯಿಂದ ಶೇಷಾದ್ರಿಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಗಾಗಿತ್ತು. ಆಪರೇಷನ್ ಸಂದರ್ಭದಲ್ಲಿ ಸಮಸ್ಯೆ ಆದ ಕಾರಣ ಕೆಜಿ ಹಳ್ಳಿಯ ಅಂಬೇಡ್ಕರ್ ಮೆಡಿಕಲ್ ಕಾಲೇಜಿಗೆ ಕಳುಹಿಸಲಾಗಿತ್ತು. ಅಲ್ಲಿಗೆ ಬರುವ ಹೊತ್ತಿಗೆ ಅವರ ಪ್ರಾಣ ಹೋದಂತೆ ಆಗಿತ್ತು. ಖಾಸಗಿ ಆಸ್ಪತ್ರೆಯಲ್ಲೇ ಏನೋ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ಮೃತ ರಂಗಸ್ವಾಮಿಯ ಅಣ್ಣ ಆರೋಪಿಸಿದ್ದಾರೆ.
ಬಳಿಕ ಅಂಬೆಡ್ಕರ್ ಮೆಡಿಕಲ್ ಕಾಲೇಜಿಗೆ ಅವರನ್ನು ದಾಖಲಿಸಲಾಗಿತ್ತು. ಕೆಲ ಹೊತ್ತಲೇ ಅವರು ಸಾವನ್ನಪ್ಪಿದ್ದಾರೆ. ಸಣ್ಣ ಶಸ್ತ್ರಚಿಕಿತ್ಸೆಯಲ್ಲೂ ನಿರ್ಲಕ್ಷ್ಯ ಮಾಡಿದ ವೈದ್ಯರ ವಿರುದ್ಧ ದೂರು ಕೊಡಲು ಶವಾಗಾರದಲ್ಲೇ ದೇಹ ಇರಿಸಲು ಕುಟುಂಬ ತೀರ್ಮಾನಿಸಿತ್ತು. ದೂರು ಕೊಟ್ಟು ಬರುವ ಹೊತ್ತಿಗೆ ಮುಖ ವಿಕಾರವಾಗಿತ್ತು. ಇಲಿಗಳು ಕಣ್ಣಿನ ರೆಪ್ಪೆ ಹಾಗೂ ಮೂಗನ್ನು ತಿಂದು ಹಾಕಿದ್ದವು. ಇದನ್ನು ಆಸ್ಪತ್ರೆಯವರು ಒಪ್ಪಿಕೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






