ಇಲ್ಲಿ ಮಹಿಳೆಯರ ಮೈಮುಟ್ಟಿ ಅಳತೆ ಮಾಡುವಂತಿಲ್ಲ: ಪುರುಷ ಟೈಲರ್ ಗಳಿಗೆ ಎಚ್ಚರಿಕೆ ಕೊಟ್ಟ ಸರ್ಕಾರ!

ನವೆಂಬರ್ 10, 2024 - 19:59
 0  15
ಇಲ್ಲಿ ಮಹಿಳೆಯರ ಮೈಮುಟ್ಟಿ ಅಳತೆ ಮಾಡುವಂತಿಲ್ಲ: ಪುರುಷ ಟೈಲರ್ ಗಳಿಗೆ ಎಚ್ಚರಿಕೆ ಕೊಟ್ಟ ಸರ್ಕಾರ!

ಇನ್ನು ಮುಂದೆ ಪುರುಷ ಟೈಲರ್ ಗಳು ಮಹಿಳೆಯರ ಉಡುಪಿನ ಅಳತೆಯನ್ನು ಪಡೆಯುವಂತಿಲ್ಲ ಎನ್ನುವುದು ಇವುಗಳ ಪೈಕಿ ಒಂದಾದರೆ, ಪುರುಷ ತರಬೇತುದಾರರು ಮಹಿಳೆಯರಿಗೆ ಜಿಮ್ ಅಥವಾ ಯೋಗ ತರಗತಿಗಳನ್ನು ನಡೆಸುವಂತಿಲ್ಲ  ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ. 

ಉತ್ತರ ಪ್ರದೇಶ ರಾಜ್ಯದಲ್ಲಿ ಇಂತಹುದೊಂದು ಮಹತ್ವದ ಆದೇಶ ತರಲಾಗಿದ್ದು, ಬೊಟಿಕ್ ಸೆಂಟರ್‌ಗಳಲ್ಲಿ ಮಹಿಳೆಯರ ಬಟ್ಟೆಗಳ ಅಳತೆಯನ್ನು ಪುರುಷರ ಬದಲಿಗೆ ಮಹಿಳೆಯರೇ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ. ಈ ಸಂಬಂಧ ಎಲ್ಲ ಜಿಲ್ಲೆಗಳಿಗೂ ಆದೇಶ ಹೊರಡಿಸಲಾಗಿದೆ.

ಬೊಟಿಕ್ ಸೆಂಟರ್‌ಗಳಲ್ಲಿ ಮಹಿಳೆಯರ ಬಟ್ಟೆಗಳ ಅಳತೆಯನ್ನು ಪುರುಷರ ಬದಲಿಗೆ ಮಹಿಳೆಯರೇ ತೆಗೆದುಕೊಳ್ಳುತ್ತಾರೆ. ಇದರೊಂದಿಗೆ ಜಿಮ್‌ಗೆ ಸಂಬಂಧಿಸಿದಂತೆ ಇದೇ ರೀತಿಯ ನಿಯಮಗಳನ್ನು ನಿಗದಿಪಡಿಸಲಾಗಿದೆ. ಜಿಮ್ ನಿರ್ವಾಹಕರು ಮಹಿಳೆಯರಿಗೆ ಮಹಿಳಾ ತರಬೇತುದಾರರನ್ನು ನೇಮಿಸಿಕೊಳ್ಳಬೇಕಾಗುತ್ತದೆ. ಮಹಿಳಾ ಆಯೋಗದ ಈ ಮಾರ್ಗಸೂಚಿಗಳನ್ನು ಜಾರಿಗೆ ತರುವಂತೆ ಎಲ್ಲ ಜಿಲ್ಲೆಗಳಿಗೆ ತಿಳಿಸಲಾಗಿದೆ.

ಇನ್ನುಮುಂದೆ ಟೈಲರ್ ಅಂಗಡಿಯಲ್ಲಿ ಮಹಿಳೆಯರ ಅಳತೆಗಳನ್ನು ತೆಗೆದುಕೊಳ್ಳಲು ಮಹಿಳಾ ಟೈಲರ್‌ಗಳನ್ನು ನೇಮಿಸಬೇಕಾಗುತ್ತದೆ. ಇಷ್ಟು ಮಾತ್ರವಲ್ಲದೇ ಅಂಗಡಿಯಲ್ಲಿ ಸಿಸಿಟಿವಿ ಅಳವಡಿಸಬೇಕು. ಮಹಿಳೆಯರಿಗಾಗಿ ವಿಶೇಷ ಬಟ್ಟೆಗಳನ್ನು ಮಾರಾಟ ಮಾಡುವ ಮಳಿಗೆಗಳು ಗ್ರಾಹಕರಿಗೆ ಸಹಾಯ ಮಾಡಲು ಮಹಿಳಾ ಉದ್ಯೋಗಿಗಳನ್ನು ನೇಮಿಸಬೇಕಾಗುತ್ತದೆ. ಕೋಚಿಂಗ್ ಸೆಂಟರ್‌ನಲ್ಲಿಯೂ ಮಹಿಳೆಯರಿಗೆ ಸಿಸಿಟಿವಿ ಮತ್ತು ಶೌಚಾಲಯಗಳನ್ನು ಹೊಂದಿರುವುದು ಅವಶ್ಯಕ. ಮಹಿಳೆಯರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ಎಲ್ಲಾ ನಿಯಮಗಳನ್ನು ನಿರ್ಧರಿಸಲಾಗಿದೆ ಎಂದು ಸೂಚಿಸಲಾಗಿದೆ.

ಈ ಕುರಿತು ಜಿಲ್ಲಾ ಪರೀಕ್ಷಾಧಿಕಾರಿ ಶಾಮ್ಲಿ ಹಮೀದ್ ಹುಸೇನ್ ಮಾತನಾಡಿ, ಅಕ್ಟೋಬರ್ 28 ರಂದು ಉತ್ತರ ಪ್ರದೇಶ ರಾಜ್ಯ ಮಹಿಳಾ ಆಯೋಗದ ಸಭೆ ನಡೆಸಲಾಗಿದ್ದು, ಮಹಿಳೆಯರ ಸುರಕ್ಷತೆ ಮತ್ತು ಅವರ ಹಕ್ಕುಗಳ ರಕ್ಷಣೆಯನ್ನು ಗಮನದಲ್ಲಿಟ್ಟುಕೊಂಡು ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow