ಈ ಬಾರಿಯ ರಣಜಿ ಟೂರ್ನಿಗೆ ಇಬ್ಬರು ಸ್ಟಾರ್ ಬ್ಯಾಟರ್ ಅಲಭ್ಯ!

ಜನವರಿ 19, 2025 - 09:23
 0  5
ಈ ಬಾರಿಯ ರಣಜಿ ಟೂರ್ನಿಗೆ ಇಬ್ಬರು ಸ್ಟಾರ್ ಬ್ಯಾಟರ್ ಅಲಭ್ಯ!

ಈ ಬಾರಿಯ ರಣಜಿ ಟೂರ್ನಿಗೆ ಇಬ್ಬರು ಸ್ಟಾರ್ ಆಟಗಾರರು ಅಲಭ್ಯರಿರಲಿದ್ದಾರೆ ಎಂದು ತಿಳಿದು ಬಂದಿದೆ. ಜನವರಿ 23 ರಿಂದ ಶುರುವಾಗಲಿರುವ ರಣಜಿ ಟೂರ್ನಿಯ ದ್ವಿತೀಯ ಹಂತದ ಪಂದ್ಯಗಳಿಗೆ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ಅಲಭ್ಯರಾಗಲಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ವೇಳೆ ವಿರಾಟ್ ಕೊಹ್ಲಿ ಕುತ್ತಿಗೆ ನೋವಿಗೆ ತುತ್ತಾಗಿದ್ದರು. ಈ ನೋವಿನಿಂದ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಅಲ್ಲದೆ ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಅವರು ರಣಜಿ ಟೂರ್ನಿಯ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಕೆಎಲ್ ರಾಹುಲ್ ಮೊಣಕೈಗೆ ಗಾಯವಾಗಿತ್ತು. ಈ ಗಾಯವು ಸಂಪೂರ್ಣ ಗುಣವಾಗಿಲ್ಲ. ಹೀಗಾಗಿ ರಣಜಿ ಟೂರ್ನಿಯಿಂದ ಹೊರಗುಳಿಯುವುದಾಗಿ ರಾಹುಲ್ ಬಿಸಿಸಿಐಗೆ ತಿಳಿಸಿದೆ. ಇದೇ ಕಾರಣದಿಂದಾಗಿ ಅವರು ವಿಜಯ ಹಝಾರೆ ಟೂರ್ನಿಯಿಂದಲೂ ಹೊರಗುಳಿದಿದ್ದಾರೆ ಎಂದು ತಿಳಿದು ಬಂದಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow