ಉತ್ತರ ಪ್ರದೇಶ ಮಾದರಿಯ ಬುಲ್ಡೋಜರ್ ಕ್ರಮ ಕರ್ನಾಟಕಕ್ಕೆ ಸದ್ಯ ಅಗತ್ಯ ಇಲ್ಲ: ಸಚಿವ ಜಿ.ಪರಮೇಶ್ವರ್

ಮೈಸೂರು: ಉತ್ತರ ಪ್ರದೇಶ ಮಾದರಿಯ ಬುಲ್ಡೋಜರ್ ಕ್ರಮ ಕರ್ನಾಟಕಕ್ಕೆ ಸದ್ಯ ಅಗತ್ಯ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಈ ಘಟನೆ ಯಾವ ಕಾರಣಕ್ಕಾಗಿ ಆಯಿತು. ಯಾರಿಂದ ಆಯ್ತು ಅಂತ ತನಿಖೆ ಮಾಡಲು ಹೇಳಿದ್ದೆ. ಪ್ರಾಥಮಿಕ ಮಾಹಿತಿ ಪಡೆಯಲು ಇಲ್ಲಿಗೆ ಬಂದಿದ್ದೇನೆ.
ಅಧಿಕಾರಿಗಳು ನನಗೆ ಎಲ್ಲಾ ವಿಚಾರವನ್ನು ತಿಳಿಸಿದ್ದಾರೆ. ತನಿಖೆಗೆ ಈಗಾಗಲೇ ಆದೇಶ ಮಾಡಿರುವುದರಿಂದ ಏನೆಲ್ಲಾ ಚರ್ಚೆ ಆಗಿದೆ. ಘಟನೆಯಲ್ಲಿ ಯಾರಿದ್ದಾರೆ ಅದೆಲ್ಲವನ್ನು ಹೇಳುವುದಕ್ಕೆ ಆಗುವುದಿಲ್ಲ ಎಂದರು. ಅಲ್ಲದೆ ರಾಜ್ಯದಲ್ಲಿ ಉತ್ತರಪ್ರದೇಶದಂತ ಪರಿಸ್ಥಿತಿ ನಿರ್ಮಾಣವಾಗಿಲ್ಲ. ನಮ್ಮ ಜನರು ಆ ಮಟ್ಟಕ್ಕೆ ಹೋಗಿಲ್ಲ. ಹೀಗಾಗಿ ಗಲಭೆಕೋರರ ಮನೆಗಳ ಮೇಲೆ ಬುಲ್ಡೋಜರ್ ಹತ್ತಿಸುವುದಿಲ್ಲ ಎಂದರು.
ಎನ್.ಆರ್ ಕ್ಷೇತ್ರ ವ್ಯಾಪ್ತಿಯಲ್ಲಿ ಇನ್ನೊಂದು ಠಾಣೆಗೆ ಪ್ರಸ್ತಾವನೆ ಇದೆ, ಇದರ ಬಗ್ಗೆ ಕ್ರಮ ಕೈಗೊಳ್ತಿವಿ. ಈ ವಿಚಾರದಲ್ಲಿ ಯಾರು ರಾಜಕೀಯ ಮಾಡಬಾರದು. ಘಟನೆ ದಿನ ಪೊಲೀಸರು ಪರಿಸ್ಥಿತಿಯನ್ನು ಸಮರ್ಥವಾಗಿಯೇ ನಿಭಾಯಿಸಿದ್ದಾರೆ. ಪೊಲೀಸರ ಬಗ್ಗೆ ವಿವಿಧ ರೀತಿಯ ಹೇಳಿಕೆ ಕೊಡುವವರಿಗೆ ಸಮಯ ಬಂದಾಗ ತಿಳುವಳಿಕೆ ಹೇಳ್ತಿನಿ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






