ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್: 7500 ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಭೋಪಾಲ್: ಮೆಟ್ರಿಕ್ಯುಲೇಷನ್ ಹಾಗೂ 8ನೇ ತರಗತಿ ಪಾಸ್ ಅಭ್ಯರ್ಥಿಗಳಿಗೆ ಸರ್ಕಾರಿ ಕೆಲಸ ಪಡೆಯಲು ಸುವರ್ಣಾವಕಾಶ ಒದಗಿದೆ. ಮಧ್ಯಪ್ರದೇಶ ಸಿಬ್ಬಂದಿ ಆಯ್ಕೆ ಮಂಡಳಿ (MPESB) ರಾಜ್ಯ ಪೊಲೀಸ್ ಪಡೆಯಲ್ಲಿ 7500 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಅರ್ಜಿಗಳನ್ನು ಸೆಪ್ಟೆಂಬರ್ 15ರಿಂದ ಸೆಪ್ಟೆಂಬರ್ 29, 2025ರವರೆಗೆ esb.mp.gov.in ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ಸಲ್ಲಿಸಬಹುದು.
ಶೈಕ್ಷಣಿಕ ಅರ್ಹತೆ:
-
ಸಾಮಾನ್ಯ, ಓಬಿಸಿ, ಎಸ್ಸಿ ವರ್ಗದ ಅಭ್ಯರ್ಥಿಗಳು – ಕನಿಷ್ಠ 10ನೇ ತರಗತಿ ಪಾಸ್.
-
ಎಸ್ಟಿ ಅಭ್ಯರ್ಥಿಗಳು – ಕನಿಷ್ಠ 8ನೇ ತರಗತಿ ಪಾಸ್.
ವಯೋಮಿತಿ:
-
18 ರಿಂದ 33 ವರ್ಷ.
-
ಮೀಸಲಾತಿ ವರ್ಗಗಳಿಗೆ ಸರ್ಕಾರಿ ನಿಯಮಗಳ ಪ್ರಕಾರ ಸಡಿಲಿಕೆ.
ಅರ್ಜಿ ಶುಲ್ಕ:
-
ಸಾಮಾನ್ಯ ಅಭ್ಯರ್ಥಿಗಳಿಗೆ ₹500.
-
ಎಸ್ಸಿ, ಎಸ್ಟಿ, ಓಬಿಸಿ ಅಭ್ಯರ್ಥಿಗಳಿಗೆ ₹250.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ (PET), ದೈಹಿಕ ಮಾನದಂಡ ಪರೀಕ್ಷೆ (PST) ಮೂಲಕ ಆಯ್ಕೆ ಮಾಡಲಾಗುತ್ತದೆ. ಲಿಖಿತ ಪರೀಕ್ಷೆ ಅಕ್ಟೋಬರ್ 30ರಿಂದ ರಾಜ್ಯದ ವಿವಿಧ ಕೇಂದ್ರಗಳಲ್ಲಿ ನಡೆಯಲಿದೆ.
ನಿಮ್ಮ ಪ್ರತಿಕ್ರಿಯೆ ಏನು?