ಉದ್ಯೋಗಿಗಳಿಗೆ ಗುಡ್ ನ್ಯೂಸ್: ನೈಋತ್ಯ ರೈಲ್ವೆಯಲ್ಲಿದೆ ಹಲವು JOB, ಆಸಕ್ತರು ಅಪ್ಲೈ ಮಾಡಿ!

ನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪಾಸಾದವರು ಸರ್ಕಾರಿ ಉದ್ಯೋಗದ ಹುಡುಕಾಟದಲ್ಲಿದ್ದರೆ ಇಲ್ಲಿ ಅಪ್ಲೈ ಮಾಡಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅಧಿಕೃತ ಲಿಂಕ್‌ಗಳಲ್ಲಿ ಪರಿಶೀಲಿಸಿಕೊಂಡು ಆಫ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ
* ಇಲಾಖೆ ಹೆಸರು : ನೈಋತ್ಯ ರೈಲ್ವೆ, ಹುಬ್ಬಳ್ಳಿ.
* ಹುದ್ದೆಗಳ ಸಂಖ್ಯೆ : 46.
* ಉದ್ಯೋಗ ಸ್ಥಳ : ಹುಬ್ಬಳ್ಳಿ/ಬೆಂಗಳೂರು/ಮೈಸೂರು (ಕರ್ನಾಟಕ).
* ವೇತನ ಶ್ರೇಣಿ : ತಿಂಗಳಿಗೆ 5,200- 20,200/- ರೂ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಇರಬೇಕಾದ ಅರ್ಹತೆಗಳು
* ಅಭ್ಯರ್ಥಿಯು 01 ಜನವರಿ 2025 ಕ್ಕೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 25 ಮೀರಿರಬಾರದು.
* ಅಭ್ಯರ್ಥಿಯು 10ನೇ, 12ನೇ, B.Sc ಯನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಅಕ್ಟೋಬರ್ 19, 2024.
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ನವೆಂಬರ್ 19, 2024.
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ
• ಕ್ರೀಡಾ ಪ್ರಯೋಗಗಳು
• ಶಿಕ್ಷಣ ಅರ್ಹತೆ
• ದೈಹಿಕ ಸಾಮರ್ಥ್ಯ ಪರೀಕ್ಷೆ
• ಡಾಕ್ಯುಮೆಂಟ್ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ
ಅರ್ಜಿ ಸಲ್ಲಿಸುವುದು ಹೇಗೆ?
* ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.
ನಿಮ್ಮ ಪ್ರತಿಕ್ರಿಯೆ ಏನು?






