ಕರ್ನಾಟಕದಲ್ಲಿ ಭಾರಿ ಮಳೆಯ ಎಚ್ಚರಿಕೆ: ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಅಕ್ಟೋಬರ್ 26, 2025 - 11:14
 0  17
ಕರ್ನಾಟಕದಲ್ಲಿ ಭಾರಿ ಮಳೆಯ ಎಚ್ಚರಿಕೆ: ಬೆಂಗಳೂರು ಸೇರಿದಂತೆ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿಯಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡು ಭಾಗದಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ.

ಹವಾಮಾನ ಇಲಾಖೆ ಪ್ರಕಾರ, ಬೆಂಗಳೂರಿನಲ್ಲಿ ಸಾಧಾರಣ ಮಳೆ ಬೀಳುವ ನಿರೀಕ್ಷೆ ಇದೆ. ನಗರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಸಣ್ಣ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಮಳೆ ಬೀಳುವ ಜಿಲ್ಲೆಗಳು:

ಉತ್ತರ ಒಳನಾಡು ಪ್ರದೇಶಗಳಾದ ಹಾವೇರಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗುಲ್ಬರ್ಗ, ಬೀದರ್, ಯಾದಗಿರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ದಕ್ಷಿಣ ಒಳನಾಡಿನ ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಹ ಸಾಧಾರಣ ಮಳೆಯಾಗಲಿದೆ.

ಇದೇ ವೇಳೆ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲೂ ಸಣ್ಣ ಪ್ರಮಾಣದ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow