ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: 9 ಜಿಲ್ಲೆಗಳಿಗೆ ರೆಡ್ ಅಲರ್ಟ್! ಅಂಗನವಾಡಿ, ಶಾಲಾ ಕಾಲೇಜಿಗೆ ರಜೆ ಘೋಷಣೆ

ಜೂನ್ 14, 2025 - 12:00
 0  17
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: 9 ಜಿಲ್ಲೆಗಳಿಗೆ ರೆಡ್ ಅಲರ್ಟ್! ಅಂಗನವಾಡಿ, ಶಾಲಾ ಕಾಲೇಜಿಗೆ ರಜೆ ಘೋಷಣೆ

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಮುಖ ಮಾಹಿತಿಯನ್ನು ನೀಡಿದೆ. ಹವಾಮಾನ ಇಲಾಖೆಯ ಪ್ರಕಾರ, ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ರಾಜ್ಯದ 9 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಇನ್ನೂ ಕೆಲವು ಜಿಲ್ಲೆಗಳಲ್ಲಿ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕರ್ನಾಟಕ, ಕೇರಳ, ಆಂಧ್ರಪ್ರದೇಶ ಸೇರಿದಂತೆ ದಕ್ಷಿಣ ಭಾರತದ ರಾಜ್ಯಗಳಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಂಡಮಾರುತದ ಪರಿಚಲನೆ ಮತ್ತು ವಾಯುಭಾರ ಕುಸಿತದಿಂದಾಗಿ ದಕ್ಷಿಣ ಭಾರತದಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ.

ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್​​ ಅಲರ್ಟ್​​ ಘೋಷಣೆ ಮಾಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸೈಕ್ಲೋನ್​ ಎಫೆಕ್ಟ್​​ನಿಂದ ಈ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಜೊತೆಗೆ ಮುಂಗಾರು ಮಳೆ ಎಚ್ಚರಿಕೆ ಕೂಡ ಇದ್ದು, ಈ ಭಾಗದ ಜನರು ಎಚ್ಚರಿಕೆಯಿಂದಿರುವಂತೆ ಸೂಚನೆ ನೀಡಲಾಗಿದೆ.

ಇತ್ತ ಭಾರೀ ಮಳೆ ಕಾರಣ ಐದು ಜಿಲ್ಲೆಗಳ ಅಂಗನವಾಡಿ, ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಧಾರವಾಡ, ಚಿಕ್ಕಮಗಳೂರು, ಉತ್ತರಕನ್ನಡ, ಉಡುಪಿ, ಮಡಿಕೇರಿಯ ಶಾಲಾ ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ. ಇತ್ತ ರಾಜ್ಯದ ಬಾಗಲಕೋಟೆ, ಗದಗ, ವಿಜಯಪುರ, ದಾವಣಗೆರೆ, ಹಾಸನ, ಮೈಸೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow