ಕರ್ನಾಟಕ ಬಂದ್: ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲ್ಲ - ಸಚಿವ ಮಧು ಬಂಗಾರಪ್ಪ

ಮಾರ್ಚ್ 1, 2025 - 14:02
 0  17
ಕರ್ನಾಟಕ ಬಂದ್: ಯಾವುದೇ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲ್ಲ - ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ನಿರ್ವಾಹಕ ಮೇಲಿನ ಹಲ್ಲೆ ಖಂಡಿಸಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ. ಈಗಾಗಲೇ ಮಾ.22 ರಂದು 7,8,9ನೇ ತರಗತಿ ಪರೀಕ್ಷೆಗಳ ನಿಗದಿಯಾಗಿದೆ. ಬಂದ್ ಎಂದು ಈಗ ಮುಂದೂಡಿಕೆ ಸಾಧ್ಯವಿಲ್ಲ. ಬಂದ್ ಇದ್ದರೂ ಯಾವುದೇ ಪರೀಕ್ಷೆ ಮುಂದೂಡಿಕೆ ಮಾಡೊಲ್ಲ.

ಪರೀಕ್ಷೆ ಅದರ ಪಾಡಿಗೆ ನಡೆಯಲಿದೆ. ಮಕ್ಕಳಿಗೆ ಯಾವುದೇ ತೊಂದರೆ ಆಗದೇ ಇರೋ ರೀತಿ ಬಂದ್ ಮಾಡೋರು ಸಹಕಾರ ಕೊಡ್ತಾರೆ. ಹೋರಾಟಗಾರರಿಗೆ ಮನವಿ ಮಾಡ್ತೀನಿ. ಹೋರಾಟ ಮಾಡೋಕೆ ನಿಮಗೆ ಹಕ್ಕು ಇದೆ. ಆದರೆ ಪರೀಕ್ಷೆ ಅನ್ನೋದು ಮಕ್ಕಳಿಗೆ ಮುಖ್ಯ. ಮಕ್ಕಳ ಭವಿಷ್ಯ ಪರೀಕ್ಷೆಯಲ್ಲಿದೆ. ಮಕ್ಕಳ ಭವಿಷ್ಯಕ್ಕೆ ಯಾವುದೇ ಅಡಚಣೆ ಮಾಡೋದಿಲ್ಲ ಎಂಬ ವಿಶ್ವಾಸ ಇದೆ ಎಂದು ಸಚಿವ ಮಧು ಬಂಗಾರಪ್ಪ  ಎಂದಿದ್ದಾರೆ.

ಬಂದ್ ಮಾಡುವ ಹೋರಾಟಗಾರರು ಯಾರು ಎಕ್ಸಾಂಗೆ ಹೋಗಬೇಡಿ ಎಂದು ಮಕ್ಕಳಿಗೆ ಹೇಳೋದಿಲ್ಲ. ಮಕ್ಕಳು ಗೊಂದಲ ಆಗೋದು ಬೇಡ. 6,7,8,9 ನೇ ತರಗತಿ ಪರೀಕ್ಷೆಗಳು ನಿಗದಿಯಂತೆ ನಡೆಯುತ್ತವೆ. ಮಕ್ಕಳು ಎಕ್ಸಾಂ ಬರೆಯಲಿ. ಈಗಾಗಲೇ ವೇಳಾಪಟ್ಟಿ ಸಿದ್ಧತೆ ಮಾಡಿ ಪ್ರಕಟ ಮಾಡಿದ್ದೇವೆ‌. ವೇಳಾಪಟ್ಟಿ ಬದಲಾವಣೆ ಆದ್ರೆ ಕಷ್ಟ ಆಗುತ್ತದೆ. ಮಕ್ಕಳ ಹಿತದೃಷ್ಟಿಯಿಂದ ಪರೀಕ್ಷೆ ಮುಂದೂಡಿಕೆ ಸರಿಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow