'ಕಾಂತಾರ' ನಟನ ಮನೆಗೆ ಬಂತು ಐಷಾರಾಮಿ ಕಾರು: ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ?

ಎಪ್ರಿಲ್ 15, 2025 - 18:02
 0  12
'ಕಾಂತಾರ' ನಟನ ಮನೆಗೆ ಬಂತು ಐಷಾರಾಮಿ ಕಾರು: ಇದರ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ?

ಕಾಂತಾರ' ಒಂದು ಸಿನಿಮಾ ರಿಷಬ್ ಶೆಟ್ಟಿಯ ನಸೀಬನ್ನೇ ಬದಲಿಸಿದೆ. ಲೋಕಲ್ ಹೀರೋ ಆಗಿದ್ದ ರಿಷಬ್ ಶೆಟ್ಟಿ ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಇವರು ನಿರ್ದೇಶಿಸಿ, ನಟಿಸುತ್ತಿರುವ 'ಕಾಂತಾರ' ಪ್ರೀಕ್ವೆಲ್‌ಗಾಗಿ ಇಡೀ ದೇಶವೇ ಎದುರು ನೋಡುತ್ತಿದೆ. ಹೀಗಾಗಿ ರಿಷಬ್ ಶೆಟ್ಟಿ ವೇಗವಾಗಿ ಸಿನಿಮಾವನ್ನು ಮುಗಿಸುವ ಪ್ರಯತ್ನ ಮಾಡುತ್ತಿದ್ದಾರೆ.

ಇನ್ನೂ ಕಾಂತಾರ 1 ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿಯಾಗಿರೋ ರಿಷಬ್ ಶೆಟ್ಟಿ ಅವರು ಹೊಚ್ಚ ಹೊಸ ಕಾರು ಖರೀದಿಸಿದ್ದಾರೆ. ರಿಷಬ್ ಶೆಟ್ಟಿ ಅವರು ಟೊಯೋಟಾ ಕಂಪನಿಯ ಕಪ್ಪು ಬಣ್ಣದ ವೆಲ್ಫೈರ್ ದುಬಾರಿ ಕಾರನ್ನು ಖರೀದಿಸಿದ್ದಾರೆ.

ರಿಷಬ್ ಶೆಟ್ಟಿ ಖರೀದಿಸಿದ ಟೊಯೋಟಾ ಕಂಪನಿ ಈ ಕಾರಿನ ಬೆಲೆ ಸದ್ಯದ ದರ 1 ಕೋಟಿ 22 ಲಕ್ಷದಿಂದ 1 ಕೋಟಿ 32 ಲಕ್ಷ ರೂಪಾಯಿಯವರೆಗೂ ಇದೆ. ಆನ್ ರೋಡ್‌ಗೆ ಈ ದುಬಾರಿ ಕಾರಿನ ಬೆಲೆ 1 ಕೋಟಿ 40 ಲಕ್ಷ ರೂಪಾಯಿ ಎನ್ನಲಾಗಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow