ಕಾಲ್ತುಳಿತ ಸಂಭವಿಸಿ ಮೂರು ತಿಂಗಳ ಬಳಿಕ ಭಾವುಕ ಪೋಸ್ಟ್‌ ಮಾಡಿದ RCB..!

ಆಗಸ್ಟ್ 28, 2025 - 21:02
 0  16
ಕಾಲ್ತುಳಿತ ಸಂಭವಿಸಿ ಮೂರು ತಿಂಗಳ ಬಳಿಕ ಭಾವುಕ ಪೋಸ್ಟ್‌ ಮಾಡಿದ RCB..!

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಸೀಸನ್-18 ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ಜೂನ್ 4 ರೊಂದು ‘ಕಪ್’ ದಿನವಾಗಿತ್ತು. ಈ ಸಂಭ್ರಮಾಚರಣೆಯಲ್ಲಿ ಸಂಭವಿಸಿದ ಕಾಲ್ತುಳಿತದಿಂದ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ದುರ್ಘಟನೆಯ ನಂತರ,

ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಯಾವುದೇ ಪೋಸ್ಟ್ ಹಂಚಿಕೊಂಡಿರಲಿಲ್ಲ. ಇದೀಗ ಬರೋಬ್ಬರಿ 84 ದಿನಗಳ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಪೋಸ್ಟ್ ಒಂದು ಕಾಣಿಸಿಕೊಂಡಿದೆ. ಅದು ಸಹ ಅಭಿಮಾನಿಗಳಿಗಾಗಿ ಹೊಸ ಭರವಸೆಯನ್ನು ನೀಡುವ ಮೂಲಕ ಎಂಬುದು ವಿಶೇಷ.

ಆರ್​ಸಿಬಿ ಪೋಸ್ಟ್​ ಸಾರಾಂಶ ಹೀಗಿದೆ:

ನಾವು ಪೋಸ್ಟ್ ಮಾಡಿ ಸುಮಾರು ಮೂರು ತಿಂಗಳಕಾಲ ಕಳೆದಿದೆನಮ್ಮ ಮೌನ, ಖಾಲಿತನದಿಂದಷ್ಟೇ ಅಲ್ಲ, ದುಃಖದಿಂದ ತುಂಬಿದ ತೀವ್ರವಾದ ಮೌನ. ಈ ಮಾಧ್ಯಮದ ಮುಖಾಂತರ ನೀವೆಲ್ಲಾ ಸಂತೋಷದಿಂದ ಸಂಭ್ರಮಿಸುವ ವಿಷಯಗಳನ್ನು ಮತ್ತು ಕ್ಷಣಗಳನ್ನು ಹಂಚಿಕೊಳ್ಳುತ್ತಿದ್ದೆವು.  ಆದರೆ ಜೂನ್ 4ರ ಘಟನೆ ಎಲ್ಲವನ್ನೂ ಬದಲಾಯಿಸಿತು.

ಆ ದಿನ ನಮ್ಮ ಹೃದಯವನ್ನು ಮುರಿಯಿತು. ನಂತರದ ಮೌನವು ಕೇವಲ ನಿಶ್ಯಬ್ದವಲ್ಲ, ಅದು ಶ್ರದ್ಧೆಯಿಂದ ತುಂಬಿದ ಶಾಂತ ಶ್ರದ್ಧಾಂಜಲಿ. ಈ ಮೌನದೊಳಗೆ ನೋವನ್ನು ಅನುಭವಿಸುತ್ತಾ ನಾವು ಆಳವಾಗಿ ಯೋಚಿಸಿದ್ದೆವು ಮತ್ತು ಅನೇಕ ವಿಷಯಗಳನ್ನು ಕಲಿತೆವು.  ನೋವನ್ನೇ ಶ್ರದ್ಧೆಯಾಗಿನಂಬಿಕೆಯಾಗಿ ರೂಪಿಸಬೇಕೆಂದು ತೀರ್ಮಾನಿಸಿದ್ದೆವು.

ಅದರ ಫಲವೇ ಆರ್‌ಸಿಬಿ ಕೇರ್ಸ್ನಮ್ಮ ಅಭಿಮಾನಿಗಳು ಮತ್ತು ಸಮುದಾಯಕ್ಕಾಗಿ ನಿಷ್ಠೆಯಿಂದ ರೂಪಿಸಿದ ಒಂದು ಯೋಜನೆ.

ಇಂದು ನಾವು ಮರಳಿದ್ದೇವೆ.  ನಿಮ್ಮೊಂದಿಗೆ ನಿಲ್ಲುವ ಭರವಸೆಯನ್ನು ನೀಡುತ್ತಾ, ಕರ್ನಾಟಕದ ಹೆಮ್ಮೆಯಾಗಿ ಮುಂದೆ ಸಾಗುತ್ತೇವೆ. ಇದು ನಮ್ಮ ಕಾಳಜಿ, ನಮ್ಮ ಪ್ರತಿಜ್ಞೆ.

ಆರ್‌ಸಿಬಿ ಕೇರ್ಸ್: ನಾವು ಸದಾ ನಿಮ್ಮೊಂದಿಗಿದ್ದೇವೆ.

ಹೆಚ್ಚಿನ ಮಾಹಿತಿ… ಶೀಘ್ರದಲ್ಲೇ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow