ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿಎಂ ಸಿದ್ದರಾಮಯ್ಯ

ಮಾರ್ಚ್ 17, 2025 - 13:59
 0  14
ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ನೀಡಿರೋದು ₹ 10,000 ಕೋಟಿ ಅಲ್ಲ, ₹1030 ಕೋಟಿ ಮಾತ್ರ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸದನದಲ್ಲಿಂದು ಮಾತಾಡಿದ ಅವರು, ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಐದು ಲಕ್ಷ ಕೋಟಿ ತೆರಿಗೆ ಸಂಗ್ರಹ ಮಾಡಿ ಕೊಡುತ್ತಿದ್ದೇವೆ. ಆದರೆ, ರಾಜ್ಯಕ್ಕೆ 51,000 ಕೋಟಿ ಅಷ್ಟೇ ವಾಪಸ್ ಬರುತ್ತಿದೆ. ಇದು ಕೇವಲ ಶೇ.10ರಷ್ಟು ಟ್ಯಾಕ್ಸ್‌ ಎಂದು ಹೇಳಿದರು.

ಬಿಜೆಪಿ ಮತ್ತು ಕಾಂಗ್ರೆಸ್ ನ ಆರ್ಥಿಕ ನೀತಿ, ನಿಲುವುಗಳು ಯಾರ ಪರವಾಗಿವೆ ಎನ್ನುವ ವ್ಯತ್ಯಾಸವನ್ನು ಸದನದಲ್ಲಿ ಮುಖ್ಯಮಂತ್ರಿಗಳು ಸದನದಲ್ಲಿ ವಿವರಿಸಿದರು. 2024-25 ಕ್ಕೆ 52,0009 ಕೋಟಿ ಇಟ್ಟು, 41,509 ಕೋಟಿ ರೂಪಾಯಿ ವೆಚ್ಚ ಮಾಡಿದ್ದೇವೆ. ಖಜಾನೆ ಖಾಲಿ ಯಾಗಿದೆ ಎಂಬ ಮಾತು ಸತ್ಯಕ್ಕೆ ದೂರ ತಾನೇ ಎಂದು ಅಂಕಿ ಅಂಶಗಳನ್ನು ಮುಂದಿಟ್ಟು ಸಿಎಂ ಪ್ರಶ್ನಿಸಿದರು.

1.26 ಕೋಟಿ ಕುಟುಂಬಗಳಿಗೆ ಯೋಜನೆಗಳು ತಲುಪುತ್ತಿದ್ದು, ಕೊಟ್ಟ ಮಾತಿನಂತೆ ನಡೆದಿದ್ದೇವೆ. ಯಾವ ಕಾರಣಕ್ಕೂ ಯಾವ ಕಾರ್ಯಕ್ರಮವನ್ನೂ ನಿಲ್ಲಿಸುವುದಿಲ್ಲ. ಸಾಲಮನ್ನಾ ಮಾಡಿ ಅಂದರೆ ಹಣ ಎಲ್ಲಿಂದ ತರುವುದು ಎಂದು ಹೇಳಿದ ಬಿಜೆಪಿ, ಅದಾನಿಯವರಿಗೆ 17 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದೀರಿ. ಇದು ನ್ಯಾಯವೇ ಎಂದು ಪ್ರಶ್ನಿಸಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow