ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ 2025 ಆರಂಭಕ್ಕೆ ಮುಹೂರ್ತ ಫಿಕ್ಸ್!

ಡಿಸೆಂಬರ್ 22, 2024 - 08:42
 0  13
ಕ್ರಿಕೆಟ್ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ 2025 ಆರಂಭಕ್ಕೆ ಮುಹೂರ್ತ ಫಿಕ್ಸ್!

ಐಪಿಎಲ್ ಅಂದ್ರೆ ಕ್ರಿಕೆಟ್ ಅಭಿಮಾನಿಗಳಿಗೆ ಹಬ್ಬ. IPL ಬರುವುದನ್ನು ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅದರಂತೆ ಕ್ರಿಕೆಟ್ ಫ್ಯಾನ್ಸ್ ಗೆ ಗುಡ್ ನ್ಯೂಸ್ ಸಿಕ್ಕಿದೆ. 

ಐಪಿಎಲ್ 2025 ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು,  ಕೆಲವೇ ತಿಂಗಳಲ್ಲಿ IPL ಅಖಾಡ ಸಜ್ಜಾಗಿದೆ. ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18ರ ಆರಂಭಕ್ಕೆ ದಿನಾಂಕ ನಿಗದಿಯಾಗಿದೆ. ಮಾರ್ಚ್ 14 ರಿಂದ ರಂಗು ರಂಗಿನ ಕ್ರಿಕೆಟ್ ಟೂರ್ನಿ ಶುರುವಾಗಲಿದ್ದು, ಮೇ ತಿಂಗಳ ಕೊನೆಯ ವಾರದಲ್ಲಿ ಫೈನಲ್ ಪಂದ್ಯ ಆಯೋಜಿಸಲು ನಿರ್ಧರಿಸಲಾಗಿದೆ.

ಭಾರತ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ ಫೈನಲ್​ಗೆ ಪ್ರವೇಶಿಸಿದರೆ ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯವು ಮೇ 25 ರಂದು ನಡೆಯಲಿದೆ ಎಂದು ಬಿಸಿಸಿಐ ಮೂಲಗಳಿಂದ ತಿಳಿದು ಬಂದಿದೆ. ಒಂದು ವೇಳೆ ಟೀಮ್ ಇಂಡಿಯಾ WTC ಫೈನಲ್​ಗೆ ತಲುಪದಿದ್ದರೆ ದಿನಾಂಕದಲ್ಲಿ ಬದಲಾವಣೆಯಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

ಏಕೆಂದರೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯವು ಜೂನ್ 11 ರಿಂದ ಶುರುವಾಗಲಿದೆ. ಅದಕ್ಕೂ ಎರಡು ವಾರ ಮುಂಚಿತವಾಗಿ ಐಪಿಎಲ್ ಟೂರ್ನಿಯನ್ನು ಪೂರ್ಣಗೊಳಿಸಲು ಆಯೋಜಕರು ನಿರ್ಧರಿಸಿದ್ದಾರೆ. ಆದರೆ ಭಾರತ ತಂಡ ಫೈನಲ್​ಗೆ ತಲುಪದಿದ್ದರೆ ಮೇ ಅಂತ್ಯದವರೆಗೆ ಐಪಿಎಲ್ ಪಂದ್ಯಾವಳಿ ನಡೆಯುವ ಸಾಧ್ಯತೆಯಿದೆ.

ಇನ್ನು ಮಾರ್ಚ್ 14 ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಕಣಕ್ಕಿಳಿಯುವ ಸಾಧ್ಯತೆಯಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow