ಕ್ಷುಲಕ ವಿಚಾರಕ್ಕೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ..! ಇಬ್ಬರು ಅರೆಸ್ಟ್

ಮೇ 6, 2025 - 12:18
 0  11
ಕ್ಷುಲಕ ವಿಚಾರಕ್ಕೆ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯ..! ಇಬ್ಬರು ಅರೆಸ್ಟ್

ಶಿವಮೊಗ್ಗ: ಕ್ಷುಲಕ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಭದ್ರಾವತಿಯ ಹೊಸಮನೆ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜರುಗಿದೆ. ಕೇಶವಪುರ ಬಡಾವಣೆಯ ಅರುಣ್ (23) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದ್ದು, ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೋಮವಾರ ಸಂಜೆ ಕ್ರಿಕೆಟ್ ವಿಚಾರವಾಗಿ ಅರುಣ್ ಹಾಗೂ ಇತರರ ನಡುವೆ ಗಲಾಟೆ ನಡೆದಿದೆ. ರಾತ್ರಿ ಕೇಶವಪುರ ಬಡಾವಣೆಯ ನೀರಿನ ಟ್ಯಾಂಕ್ ಕೆಳಗೆ ಕುಳಿತು ಮದ್ಯ ಸೇವಿಸುತ್ತಿರುವಾಗ ಮತ್ತೆ ಯುವಕರ ನಡುವೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿದೆ. ಈ ವೇಳೆ, ಅರುಣ್ ಎಂಬಾತನಿಗೆ ಲಾಂಗ್​ಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ, ಹೊಸಮನೆ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow