ಖ್ಯಾತ ಬ್ರಿಟನ್ ಗಾಯಕ ಹೋಟೆಲ್ ಮಹಡಿಯಿಂದ ಬಿದ್ದು ಮರಣ! ಸಾವಿನ ಸುತ್ತ ಹಲವು ಅನುಮಾನ!

ಹೋಟೆಲ್ ಮಹಡಿಯಿಂದ ಬಿದ್ದು ಖ್ಯಾತ ಬ್ರಿಟನ್ ಗಾಯಕ ಲಿಯಾಮ್ ಪಾಯ್ನ್ ಅರ್ಜೆಂಟೀನಾದ ಸಾವನ್ನಪ್ಪಿದ್ದಾರೆ.
ಘಟನೆ ಅವರ ಅಭಿಮಾನಿಗಳಲ್ಲಿ ತೀವ್ರ ಬೇಸರದ ಜೊತೆಗೆ ಅನುಮಾನವನ್ನೂ ಹುಟ್ಟುಹಾಕಿದೆ. ಲಿಯಾಮ್ ಸಾವಿಗೆ ಮುನ್ನ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಡಿರುವ ಕರೆ ಕೆಲವು ಅನುಮಾನಗಳನ್ನು ಹುಟ್ಟು ಹಾಕಿದೆ.
ಲಿಯಾಮ್, ನಗರದ ಕಾಸಾ ಸರ್ ಹೋಟೆಲ್ನ ಮೂರನೇ ಮಹಡಿಯ ತನ್ನ ಕೋಣೆಯ ಬಾಲ್ಕನಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಳಗೆ ಹಾರಿದ ಕೂಡಲೇ ಲಿಯಾಮ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಇದೇ ವಿಷಯವಾಗಿ ಮಾತನಾಡಿರುವ ಬೋನಸ್ ಐರಿಸ್ ಭದ್ರತಾ ಮುಖ್ಯಸ್ಥ, ‘ಸಂಜೆ ಐದು ಗಂಟೆ ವೇಳೆಗೆ ಘಟನೆ ನಡೆದಿದ್ದು, ಕೂಡಲೇ ಪೊಲೀಸರು ಸ್ಥಳಕ್ಕೆ ಆಗಮಿಸಿದರು ಆ ವೇಳೆಗಾಗಲೆ ಲಿಯಾಮ್ ನಿಧನ ಹೊಂದಿದ್ದರು. ಆತ ಬಹಳ ಒರಟು ಹಾಗೂ ಮಾದಕ ದ್ರವ್ಯ ವ್ಯಸನಿಯಾಗಿದ್ದ, ಮಾದಕ ವಸ್ತು ಸೇವಿಸಿಯೇ ಆತ ಈ ಕೃತ್ಯ ಎಸಗಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಆದರೆ ಈ ಸಾವಿನ ಸುತ್ತ ಸಾಕಷ್ಟು ಅನುಮಾನ ಮೂಡಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






