ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದರು.
ಇನ್ನೂ ಈ ಆತ್ಮಹತ್ಯೆಯು ಸರ್ಕಾರಕ್ಕೂ ಮತ್ತು ನನಗೂ ಹೇಗೆ ಸಂಬಂಧಿಸಿದೆ ಎಂಬುದನ್ನು ಕರ್ನಾಟಕದ ಜನರ ಮುಂದಿಡುವಲ್ಲಿ ಅವರಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಈ ವಿಚಾರದ ಮೂಲಕ ಅವರು ತಮ್ಮ ನಾಯಕತ್ವವನ್ನು ಸ್ಥಾಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಬಿಜೆಪಿ ಈಗ ಒಂದು ಬಣ-ಪ್ರೇರಿತ ಪಕ್ಷವಾಗಿದೆ. ಕರ್ನಾಟಕದಲ್ಲಿ ನಾಯಕತ್ವದ ಕಿತ್ತಾಟ ನಡೆಯುತ್ತಲೇ ಇದೆ. ಅವರು ಎಂದಿನಂತೆ ಈ ಸಾವನ್ನು ರಾಜಕೀಯ ಮಾಡುತ್ತಿದ್ದಾರೆ' ಎಂದು ದೂರಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






