ಗೃಹಲಕ್ಷ್ಮಿ ಹಣ ಬಂದಿಲ್ಲ ಅನ್ನೋ ಮಹಿಳೆಯರಿಗೆ ಸಿಕ್ತು ಗುಡ್ ನ್ಯೂಸ್.! ಇಲ್ಲಿದೆ ಮಾಹಿತಿ

ಜೂನ್ 3, 2025 - 18:04
 0  17
ಗೃಹಲಕ್ಷ್ಮಿ ಹಣ ಬಂದಿಲ್ಲ ಅನ್ನೋ ಮಹಿಳೆಯರಿಗೆ ಸಿಕ್ತು ಗುಡ್ ನ್ಯೂಸ್.! ಇಲ್ಲಿದೆ ಮಾಹಿತಿ

ಬೆಂಗಳೂರು: ಮಹಿಳೆಯರಿಗಾಗಿ ರಾಜ್ಯ ಸರ್ಕಾರ ಜಾರಿಗೆ ತಂದ ಯೋಜನೆ ಗೃಹಲಕ್ಷ್ಮಿ ಯೋಜನೆ ಆಗಿದೆ. ಒಂದು ಯೋಜನೆಯ ಅನುಸಾರ ಮಹಿಳೆಯರಿಗೆ ಪ್ರತಿ ತಿಂಗಳು ₹2000 ರೂಪಾಯಿ ಅವರ ಬ್ಯಾಂಕ್ ಖಾತೆಗೆ ಜಮೆ ಆಗಬೇಕಿತ್ತು. ದರೆ ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಬಂದಿಲ್ಲ ಎಂದು ಆರೋಪ ಕೇಳಿಬಂದಿದೆ. ವಿಚಾರವಾಗಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ಪ್ರತಿಕ್ರಿಯಿಸಿದ್ದು, ಏಪ್ರಿಲ್ ತಿಂಗಳದ್ದು ಹಣ ಬಿಲ್ಲಿಂಗ್ ಆಗುತ್ತಿದೆ. ಮಾರ್ಚ್ ತಿಂಗಳದ್ದು ಇಯರ್ ಎಂಡ್ ಆಗಿದ್ದರಿಂದ ತಡವಾಗಿದೆ. ಆದಷ್ಟು ಬೇಗ ಹಣ ಹಾಕುತ್ತೇವೆ ಎಂದು ಹೇಳಿದರು.

ಗೃಹಲಕ್ಷ್ಮಿ ಬಾಕಿ ಹಣಕ್ಕೆ ಸಂಬಂಧಿಸಿದಂತೆ ಸ್ವತಃ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರೇ ಮಾಹಿತಿ ನೀಡಿದ್ದು, ಮಾರ್ಚ್ನಲ್ಲಿ ವಿತ್ತೀಯ ವರ್ಷ ಮುಕ್ತಾಯವಾಗುವ ಕಾರಣದಿಂದಾಗಿ ಹಣ ಬಿಡುಗಡೆ ತಡವಾಗಿದೆ. ಅದರ ಹೊರತಾಗಿ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ

2025ರಲ್ಲಿ ಕೇವಲ ಜನವರಿ ಮತ್ತು ಫೆಬ್ರವರಿ ತಿಂಗಳಲ್ಲಿ ಮಾತ್ರ ಮಹಿಳೆಯರ ಖಾತೆಗೆ ಗೃಹಲಕ್ಷ್ಮಿ ಯೋಜನೆಯ ಹಣ ಹಾಕಿ ಗ್ಯಾರಂಟಿ ಹೆಸರಿನಲ್ಲಿ ಜನರನ್ನು ಯಾಮಾರಿಸುತ್ತಿದೆ ಎಂಬ ವಿರೋಧಪಕ್ಷಗಳ ಟೀಕೆಗೆ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾರ್ಚ್ ತಿಂಗಳಿನಿಂದ ಬಾಕಿ ಉಳಿದಿರುವ ಮೂರು ತಿಂಗಳ ಹಣವೂ ಸಹ ಒಟ್ಟಿಗೆ ಖಾತೆಗೆ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ.

ಲಭ್ಯವಿರುವ ಮಾಹಿತಿಗಳ ಪ್ರಕಾರ, ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಬಾಕಿ ಹಣ ಬಿಡುಗಡೆ ಮಾಡಲಾಗಿದ್ದು, ಶೀಘ್ರದಲ್ಲೇ ಫಲಾನುಭವಿಗಳ ಖಾತೆಗೆ ಹಣ ಜಮಾ ಆಗಲಿದೆ ಎಂದು ತಿಳಿದುಬಂದಿದೆ

 

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow