ಗ್ಯಾರಂಟಿಗಳ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಯಾವ ನೈತಿಕ ಹಕ್ಕಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಗ್ಯಾರಂಟಿಗಳ ಬಗ್ಗೆ ಮಾತನಾಡಲು ಕುಮಾರಸ್ವಾಮಿಗೆ ಯಾವ ನೈತಿಕ ಹಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಜನರಿಗೆ ಉತ್ತರ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.
ನಾವು ಕರ್ನಾಟಕ ರಾಜ್ಯದಿಂದ ಕೇಂದ್ರಕ್ಕೆ 4.50 ಲಕ್ಷ ಕೋಟಿ ತೆರಿಗೆಯನ್ನು ಕಟ್ಟುತ್ತೇವೆ. ನಮಗೆ ವಾಪಸ್ಸು ಬರುವುದು 59 ಸಾವಿರ ಕೋಟಿ ಮಾತ್ರ. ಉಳಿದ ದುಡ್ಡು ಕೇಂದ್ರದಲ್ಲಿಯೇ ಇರುತ್ತದೆ. ಅದನ್ನು ರಾಜ್ಯಕ್ಕೆ ಕೊಡಿಸಲಿ ಎಂದರು. ಬರೀ ಮಾತನಾಡಿದರೆ ಪ್ರಯೋಜನವೇನು? ಹೆಚ್.ಡಿ.ದೇವೇಗೌಡರಾಗಲಿ, ಕುಮಾರಸ್ವಾಮಿಯವರಾಗಲಿ ಕರ್ನಾಟಕಕ್ಕೆ ಅನ್ಯಾಯವಾದಾಗ ಮಾತನಾಡಿದ್ದರೆಯೇ ಎಂದು ಪ್ರಶ್ನಿಸಿದರು.
ನಿಮ್ಮ ಪ್ರತಿಕ್ರಿಯೆ ಏನು?






