ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆಶಿ!

ಆಗಸ್ಟ್ 26, 2025 - 18:00
 0  14
ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಕೆಶಿ!

 

 

ಬೆಂಗಳೂರು: ಕೋಟ್ಯಂತರ ಮಂದಿಯ ಕನಸಿನ ಸೂರು ಬೆಂಗಳೂರು ಕೆಂಪೇಗೌಡರು ಕಟ್ಟಿದ್ದ ನಾಲ್ಕು ಗಡಿ ಗೋಪುರಗಳನ್ನು ದಾಟಿ ಬೆಳೆದು ಅದೆಷ್ಟೋ ವರ್ಷಗಳಾಯಿತು. ನಾಲ್ಕೈದು ಕಿಲೋ ಮೀಟರ್ ಸುತ್ತಳತೆಯ ಬೆಂಗಳೂರು ಇದೀಗ 50-60 ಕಿಲೋ ಮೀಟರ್ ವಿಸ್ತೀರ್ಣಕ್ಕೂ ಮೀರಿ ಬೆಳೆದುಬಿಟ್ಟಿದೆ. ದಿನದಿಂದ ದಿನಕ್ಕೆ ಬೆಂಗಳೂರಿನ ವ್ಯಾಪ್ತಿ ದೊಡ್ಡದಾಗುತ್ತಲೇ ಹೋಗುತ್ತಿದೆ. ಇದಕ್ಕಾಗಿ ಸರ್ಕಾರ ಹೊಸದೊಂದು ಯೋಜನೆ ಕೊಟ್ಟಿದ್ದು,

ಸದ್ಯ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬಂದಿದೆ. ಇದೀಗ ರಾಜ್ಯ ಸರ್ಕಾರ, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷ ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿದೆ. ಗ್ರೇಟರ್​ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಾಧ್ಯಕ್ಷರಾಗಿ ಡಿಸಿಎಂ ಡಿಕೆ ಶಿವಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ಇನ್ನು ಕೇಂದ್ರದಲ್ಲಿನ ಬೆಂಗಳೂರಿನ ಸಚಿವರು, ರಾಜ್ಯ ಸರ್ಕಾರದ ಬೆಂಗಳೂರಿನ ಸಚಿವರು, ನಗರದ ಸಂಸದರು, ಶಾಸಕರು ಹಾಗೂ ಎಂಎಲ್​ ಸಿಗಳು ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ. ಮುಖ್ಯವಾಗಿ ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನೂ ಸಹ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸದಸ್ಯರನ್ನಾಗಿ ಮಾಡಲಾಗಿದೆ.

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಮೇಯರ್, ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯ ಕಾರ್ಯದರ್ಶಿ ಮತ್ತು ಪದನಿಮಿತ್ತ ಸದಸ್ಯರು ಸೇರಿ ಒಟ್ಟು 75 ಜನರನ್ನು ನೇಮಕ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯ ಜಿಬಿಎ ಪದನಿಮಿತ್ತ ಅಧ್ಯಕ್ಷರಾಗಿದ್ದರೆ, ಉಪಾಧ್ಯಕ್ಷರಾಗಿ ಡಿಸಿಎಂ ಮತ್ತು ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಸಚಿವ ಡಿ.ಕೆ. ಶಿವಕುಮಾರ್ ಅವರನ್ನ ನೇಮಕ ಮಾಡಲಾಗಿದೆ. ಇನ್ನುಳಿದಂತೆ ಕೇಂದ್ರ ಸರ್ಕಾರದಲ್ಲಿನ ಬೆಂಗಳೂರಿನ ಸಚಿವರು, ರಾಜ್ಯ ಸರ್ಕಾರದಲ್ಲಿನ ಬೆಂಗಳೂರಿನ ಸಚಿವರು, ಬೆಂಗಳೂರಿನ ಸಂಸದರು, ರಾಜ್ಯಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರನ್ನು ಜಿಬಿಎ ಪದನಿಮಿತ್ತ ಸದಸ್ಯರನ್ನಾಗಿ ನೇಮಿಸಲಾಗಿದೆ.

ಎನ್​​.ಆರ್​.ಚೌಕದಲ್ಲಿರುವ ಪಾಲಿಕೆಯ ಆಡಳಿತಾಧಿಕಾರಿಯ ಕಚೇರಿಯನ್ನು ಇನ್ನು ಮುಂದೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ) ಅಧ್ಯಕ್ಷರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಚೇರಿಯಾಗಿದೆ. ಇನ್ನು ಗ್ರೇಟರ್‌ ಬೆಂಗಳೂರು ಆಡಳಿತ ವಿಧೇಯಕ-2024ರ ಅಡಿಯಲ್ಲಿ ಸರ್ಕಾರ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ರಚನೆ ಮಾಡಲಾಗಿದೆ. ಈ ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆಗಳನ್ನು ರಚನೆ ಮಾಡಲಾಗಿದೆ.

5 ಪಾಲಿಕೆಗಳು ಯಾವ್ಯಾವು?

  • ಬೆಂಗಳೂರು ದಕ್ಷಿಣ ಮಹಾನಗರ ಪಾಲಿಕೆ
  • ಬೆಂಗಳೂರು ಉತ್ತರ ಮಹಾನಗರ ಪಾಲಿಕೆ
  • ಬೆಂಗಳೂರು ಕೇಂದ್ರ ಮಹಾನಗರ ಪಾಲಿಕೆ
  • ಬೆಂಗಳೂರು ಪಶ್ಚಿಮ ಮಹಾನಗರ ಪಾಲಿಕೆ
  • ಬೆಂಗಳೂರು ಪೂರ್ವ ಮಹಾನಗರ ಪಾಲಿಕೆ

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow