ಚಾಂಪಿಯನ್ಸ್ ಟ್ರೋಫಿಗೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್: ಸ್ಟಾರ್ ಆಲ್ರೌಂಡರ್ ಅಲಭ್ಯ?

ಚಾಂಪಿಯನ್ಸ್ ಟ್ರೋಫಿಗೂ ಮುನ್ನವೇ ಆಸ್ಟ್ರೇಲಿಯಾ ತಂಡಕ್ಕೆ ಬಿಗ್ ಶಾಕ್ ಎದುರಾಗಿದ್ದು, ಸ್ಟಾರ್ ಆಲ್ರೌಂಡರ್ ಅಲಭ್ಯ ಇರುವ ಸಾಧ್ಯತೆ ಇದೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ವೇಳೆ ಬೆನ್ನು ನೋವಿನ ಸಮಸ್ಯೆಗೆ ಒಳಗಾಗಿದ್ದ ಮಾರ್ಷ್ ಇನ್ನೂ ಸಹ ಚೇತರಿಸಿಕೊಂಡಿಲ್ಲ. ಇದೀಗ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಅಲಭ್ಯರಾಗಿರುವ ಮಿಚೆಲ್ ಮಾರ್ಷ್ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಸಂಪೂರ್ಣ ಗುಣಮುಖರಾಗುವ ಸಾಧ್ಯತೆಯಿಲ್ಲ ಎಂದು ವೈದ್ಯಕೀಯ ವರದಿಗಳು ತಿಳಿಸಿದೆ. ಹೀಗಾಗಿ ಚಾಂಪಿಯನ್ಸ್ ಟ್ರೋಫಿಯಿಂದ ಹೊರಗುಳಿಯಲು ಮಾರ್ಷ್ ನಿರ್ಧರಿಸಿದ್ದಾರೆ.
ಇದಕ್ಕೂ ಮುನ್ನ ಚಾಂಪಿಯನ್ಸ್ ಟ್ರೋಫಿಗಾಗಿ ಪ್ರಕಟಿಸಲಾದ 15 ಸದಸ್ಯರ ಆಸ್ಟ್ರೇಲಿಯಾ ತಂಡದಲ್ಲಿ ಮಿಚೆಲ್ ಮಾರ್ಷ್ ಆಲ್ರೌಂಡರ್ ಆಗಿ ಸ್ಥಾನ ಪಡೆದಿದ್ದರು. ಆದರೀಗ ಅವರು ಹೊರಗುಳಿದಿರುವ ಕಾರಣ ಬದಲಿ ಆಲ್ರೌಂಡರ್ನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಕ್ರಿಕೆಟ್ ಆಸ್ಟ್ರೇಲಿಯಾ ಮುಂದಿದೆ.
ನಿಮ್ಮ ಪ್ರತಿಕ್ರಿಯೆ ಏನು?






