ಚಾಲೆಂಜಿಂಗ್ ಸ್ಟಾರ್ ದರ್ಶನ್’ಗೆ ಶಾಕ್: ಹೈಕೋರ್ಟ್ ಬೇಲ್’ಗೆ ಸುಪ್ರೀಂ ಅಸಮಾಧಾನ

ನವದೆಹಲಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಜಾಮೀನನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಿತು. ನ್ಯಾಯಮೂರ್ತಿ ಜೆ.ಬಿ. ಪರ್ದಿವಾಲಾ ಅವರ ಪೀಠದಲ್ಲಿ ಈ ವಿಚಾರಣೆ ನಡೆದಿದೆ.
ವಿಚಾರಣೆ ವೇಳೆ, ಹೈಕೋರ್ಟ್ ಜಾಮೀನು ನೀಡುವಾಗ ಸೂಕ್ತ ವಿವೇಚನೆ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ. “ಈ ಕುರಿತು ನಿಮ್ಮ ಅಭಿಪ್ರಾಯವೇನು?” ಎಂದು ನ್ಯಾಯಮೂರ್ತಿ ಪರ್ದಿವಾಲಾ ಅವರು, ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ಪ್ರಶ್ನಿಸಿದರು.
ಕೋರ್ಟ್ ಸ್ಪಷ್ಟವಾಗಿ, “ಹೈಕೋರ್ಟ್ ಆದೇಶವನ್ನು ಹೇಗೆ ನೀಡಿದೆ ಎನ್ನುವುದನ್ನು ನೀವು ಗಮನಿಸಿರಬಹುದು,” ಎಂದು ಹೇಳಿದ್ದು, ಜಾಮೀನಿನ ಮೇಲಿನ ಅಸಮಾಧಾನವನ್ನು ವ್ಯಕ್ತಪಡಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 22ಕ್ಕೆ ನಿಗದಿಪಡಿಸಲಾಗಿದೆ.
ಎರಡೂ ಕಡೆಯ ವಕೀಲರು ತಮ್ಮ ವಾದಗಳನ್ನು ಸಿದ್ಧಪಡಿಸಿಕೊಳ್ಳಬೇಕೆಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಅಂತಿಮವಾಗಿ ಆ ದಿನದ ವಿಚಾರಣೆಯಲ್ಲಿ, ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿ ಆರೋಪಿಗಳಿಗೆ ಜಾಮೀನು ಮುಂದುವರಿಯುತ್ತದೆಯೇ ಅಥವಾ ಅವರನ್ನು ಮತ್ತೆ ಜೈಲಿಗೆ ಕಳುಹಿಸಲಾಗುತ್ತದೆಯೇ ಎಂಬುದು ನಿರ್ಧಾರವಾಗಲಿದೆ.
ನಿಮ್ಮ ಪ್ರತಿಕ್ರಿಯೆ ಏನು?






