ಚಿನ್ನ ಕಳ್ಳಸಾಗಣೆ ಕೇಸ್: ಸ್ಟಾರ್ ಹೋಟೆಲ್ ಮಾಲೀಕನ ಮೊಮ್ಮಗ ಅರೆಸ್ಟ್!

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಜಂಟಿ ತನಿಖೆ ಶುರುವಾಗಿದೆ. ಡಿಆರ್ಐ ಹಾಗೂ ಸಿಬಿಐ ತನಿಖಾ ತಂಡಗಳು ಅಕ್ರಮ ಗೋಲ್ಡ್ ಸ್ಮಗ್ಲಿಂಗ್ ಜಾಲ ಪತ್ತೆಗೆ ಇಳಿದಿದ್ದು, ಇದೀಗ ಡಿಆರ್ಐ ಅಧಿಕಾರಿಗಳು ನಟಿ ರನ್ಯಾ ರಾವ್ ಮತ್ತು ಉದ್ಯಮಿ ಪುತ್ರ ತರುಣ್ ರಾಜು ಅವರನ್ನ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿಸಿದ್ದಾರೆ.
ಇಬ್ಬರೂ ವರ್ಷಗಳಿಂದ ಸ್ನೇಹಿತರಾಗಿದ್ದು, ತರುಣ್ ರಾಜು, ರನ್ಯಾ ರಾವ್ ಅವರಿಂದ ಚಿನ್ನ ತರಿಸಿಕೊಳ್ಳುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣದಲ್ಲಿ ಪ್ರಭಾವಿ ರಾಜಕಾರಣಿಗಳ ಹೆಸರು ಕೂಡ ಕೇಳಿಬರುತ್ತಿದೆ.
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರನ್ಯಾ ರಾವ್ ಅವರೊಂದಿಗೆ ಉದ್ಯಮಿ ಪುತ್ರ ತರುಣ್ ಹೆಸರು ಕೇಳಿಬಂದಿತ್ತು. ಹೀಗಾಗಿ ವಿಚಾರಣೆ ಮಾಡಿದ ಅಧಿಕಾರಿಗಳು ನಂತರ ಬಂಧಿಸಿದ್ದಾರೆ. ಇನ್ನು ನಟಿ ರನ್ಯಾ ರಾವ್ ಮತ್ತು ತರುಣ್ ರಾಜು ಇಬ್ಬರು ವರ್ಷಗಳಿಂದ ಸ್ನೇಹಿತರಾಗಿದ್ದರು. ರನ್ಯಾ ರಾವ್ರಿಂದ ತರುಣ್ ರಾಜು ಚಿನ್ನ ತರಿಸಿಕೊಳ್ಳುತ್ತಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






