ಚಿನ್ನ ಕಳ್ಳಸಾಗಾಟ ಕೇಸ್’ಗೆ ಬಿಗ್ ಟ್ವಿಸ್ಟ್: ರನ್ಯಾ ರಾವ್ ಜೊತೆ ಇದೆ ಕರ್ನಾಟಕದ ಪ್ರಭಾವಿ ರಾಜಕಾರಣಿ ಲಿಂಕ್

ವಿದೇಶದಿಂದ ಅಕ್ರಮವಾಗಿ ಚಿನ್ನವನ್ನು ಬಚ್ಚಿಟ್ಟುಕೊಂಡು ಬಂದ ಪ್ರಕರಣದಲ್ಲಿ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಬಂಧನಕ್ಕೆ ಒಳಗಾಗಿರುವ ಕಳಂಕಿತ ನಟಿ, ಪ್ರಕರಣಕ್ಕೆ ಹೊಸ ಟ್ವಿಸ್ಟ್ ನೀಡಿದ್ದಾರೆ. ರನ್ಯಾ ರಾವ್ ಪ್ರಕರಣವನ್ನು ಡಿಆರ್ಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಈ ವೇಳೆ ಬಗೆದಷ್ಟು ಹಲವು ಕುತೂಹಲಕಾರಿ ಮಾಹಿತಿ ಹೊರಬರುತ್ತಿವೆ.
ನಟಿ ರನ್ಯಾ ಚಿನ್ನ ಕಳ್ಳಸಾಗಣೆ ಮಾಡುವ ಹಿಂದೆ ಗ್ಯಾಂಗ್ ಇದೆಯೆಂಬ ಅನುಮಾನದ ಶಂಕೆ ಮೇರೆಗೆ ತನಿಖೆ ನಡೆಸಿದಾಗ ಈ ಕೃತ್ಯದ ಹಿಂದೆ ಹಲವು ಪ್ರಭಾವಿ ವ್ಯಕ್ತಿಗಳು ಇರುವ ಸುಳಿವು ಪತ್ತೆಯಾಗಿದ್ದು, ರನ್ಯಾ ರಾವ್‌ಗೆ ರಾಜಕೀಯ ವ್ಯಕ್ತಿಗಳಿಗೂ ಇದೆ ದೊಡ್ಡ ನಂಟು ಇರುವುದರಿಂದ ಅವರ ಕಂಪನಿಗೆ ಸರ್ಕಾರದಿಂದ ಬರೋಬ್ಬರಿ 12 ಎಕರೆ ಜಮೀನು ಮಂಜೂರು ಮಾಡಲಾಗಿದೆ.
ಹೌದು…. ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ರನ್ಯಾ ರಾವ್ ಅವರನ್ನ ಬಂಧಿಸಿ DRI ಅಧಿಕಾರಿಗಳು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಈ ವಿಚಾರಣೆಯ ವೇಳೆ ಆರೋಪಿಯ ಈ ಕೃತ್ಯದ ಹಿಂದೆ ಹಲವು ಪ್ರಭಾವಿ ವ್ಯಕ್ತಿಗಳು ಇರುವ ಸುಳಿವು ಪತ್ತೆಯಾಗಿದೆ. ಆರೋಪಿತೆ ನಟಿ ರನ್ಯಾ ರಾವ್‌ಗೆ ಹಲವು ರಾಜಕೀಯ ನಾಯಕರ ಜೊತೆ ಸಂಪರ್ಕ ಇದೆ. ಅದರಲ್ಲೂ ಕಾಂಗ್ರೆಸ್ ಸರ್ಕಾರದ ಪ್ರಭಾವಿ ರಾಜಕಾರಣಿಯ ಹೆಸರು ಕೂಡ ಇದರಲ್ಲಿ ಕೇಳಿ ಬಂದಿದೆ.
ನಿಮ್ಮ ಪ್ರತಿಕ್ರಿಯೆ ಏನು?






