ಚೆಕ್ ಬೌನ್ಸ್ ಕೇಸ್: ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ಪ್ರಕಟ!

ಬೆಂಗಳೂರು:- ಚೆಕ್ ಬೌನ್ಸ್ ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳಿಗೆ ಕೋರ್ಟ್ ಶಿಕ್ಷೆ ಪ್ರಕಟಿಸಿ ಆದೇಶಿಸಿದೆ. ಅರ್ಜಿ ವಿಚಾರಣೆ ನಡೆಸಿದ ೪೨ನೇ ಎಸಿಎಂಎಂ ನ್ಯಾಯಾಲಯ, ಚೆಕ್ ಬೌನ್ಸ್ ಕೇಸ್ ನಲ್ಲಿ 1 ಕೋಟಿ 25 ಲಕ್ಷ ದಂಡ ಪಾವತಿಸುವಂತೆ ಮಾಜಿ ಸಚಿವ ಬಿ.ನಾಗೇಂದ್ರ, ಬಿ.ಸಿ.ಇನ್ಫ್ರಾಸ್ಟ್ರಕ್ಚರ್, ಅನಿಲ್ ರಾಜಶೇಖರ್ ಚಂಡೂರು ಭಾಸ್ಕರ್ ಗೆ ಸೂಚಿಸಿದೆ. ದಂಡ ಪಾವತಿಸದಿದ್ದರೆ 1 ವರ್ಷ ಸೆರೆವಾಸ ಅನುಭವಿಸಲು ಆದೇಶ ಹೊರಡಿಸಿದೆ.
ಏನಿದು ಪ್ರಕರಣ:
ದೂರುದಾರ ವಿಎಸ್ಎಲ್ ಸ್ಟೀಲ್ಸ್ ಲಿಮಿಟೆಡ್ ಹಾಗೂ ಮಾಜಿ ಸಚಿವ ಬಿ.ನಾಗೇಂದ್ರ ಹಾಗೂ ಅನಿಲ್ ರಾಜಶೇಖರ್ ಚುಂಡೂರು ಭಾಸ್ಕರ್ ಪಾಲುದಾರಿಕೆಯ ಬಿ.ಸಿ. ಇನ್ಫ್ರಾಸ್ಟ್ರಕ್ಚರ್ ಅಂಡ್ ರಿಸೋರ್ಸ್ ಕಂಪನಿ ನಡುವೆ 2013 ರಿಂದಲೂ ಹಣಕಾಸು ವಿವಾದವಿತ್ತು. ವಿಎಸ್ಎಲ್ ಕಂಪೆನಿ ಪರವಾಗಿ ಕೋರ್ಟ್ ಆದೇಶ ನೀಡಿದ್ದು, ಬಿ. ನಾಗೇಂದ್ರ ಪಾಲುದಾರಿಕೆಯ ಕಂಪೆನಿ ಒಟ್ಟು 2 ಕೋಟಿ 53 ಲಕ್ಷ ಪಾವತಿಸಬೇಕಿತ್ತು. ಇದರ ಭಾಗವಾಗಿ 1 ಕೋಟಿ ರೂಪಾಯಿಯ ಚೆಕ್ ಅನ್ನು ನೀಡಲಾಗಿತ್ತು.
ಆದರೆ, 2022 ರಲ್ಲಿ ಚೆಕ್ಬೌನ್ಸ್ ಆದ ಹಿನ್ನಲೆಯಲ್ಲಿ ವಿಎಸ್ಎಲ್ ಸ್ಟೀಲ್ಸ್ ಲಿಮಿಟೆಡ್ ಕೇಸ್ ದಾಖಲಿಸಿತ್ತು. ಸಾಕ್ಷ್ಯ ವಿಚಾರಣೆ ಬಳಿಕ ಕೋರ್ಟ್ ತೀರ್ಪು ನೀಡಿದ್ದು, 1 ಕೋಟಿ 23 ಲಕ್ಷ ದಂಡ ಪಾವತಿಸುವಂತೆ ಆದೇಶ ನೀಡಿದೆ. ಇದರಲ್ಲಿ 10 ಸಾವಿರ ಸರ್ಕಾರಕ್ಕೆ ಉಳಿದ ಹಣ ದೂರುದಾರ ಕಂಪೆನಿಗೆ ಪಾವತಿಸುವಂತೆ ಕೋರ್ಟ್ ಆದೇಶ ನೀಡಿದೆ.
ನಿಮ್ಮ ಪ್ರತಿಕ್ರಿಯೆ ಏನು?






