ಜಾತಿ ಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ: ಆರ್.ಅಶೋಕ್

ಜುಲೈ 3, 2025 - 14:07
 0  7
ಜಾತಿ ಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ: ಆರ್.ಅಶೋಕ್

ಬೆಂಗಳೂರು: ಜಾತಿ ಗಣತಿ ವರದಿ ವಿಚಾರದಲ್ಲಿ ಸಿದ್ದರಾಮಯ್ಯನವರಿಗೆ ಮುಖಭಂಗವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಮಾಡುವಾಗ ಇವರು ಮತ್ತೆ ಗಣತಿ ಮಾಡಿದರೆ ಅದಕ್ಕೆ ಕಿಮ್ಮತ್ತಿಲ್ಲ. ಗಣತಿ ಮಾಡಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಧಿಕಾರವಿಲ್ಲ ಎಂದು ತಿಳಿಸಿದರು.

ವಾಲ್ಮೀಕಿ ನಿಗಮದ ಹಗರಣವನ್ನು ಸಿಬಿಐಗೆ ನೀಡಿರುವುದರಿಂದ ಬಿಜೆಪಿಯ ಹೋರಾಟಕ್ಕೆ ಜಯ ಸಿಕ್ಕಿದೆ. ಕೋರ್ಟ್‌ ನಮಗೆ ನಿಜವಾದ ನ್ಯಾಯ ನೀಡಿದೆ ಎಂದರು.

ಆರ್‌ಎಸ್‌ಎಸ್‌ ನಿಷೇಧಿಸಿದರೆ ಮತ್ತೆ ಸಂಘಟನೆ ಪುಟಿದೇಳುತ್ತದೆ. ನಾನು, ಪ್ರಧಾನಿ ನರೇಂದ್ರ ಮೋದಿ, ಅನೇಕ ರಾಜ್ಯಗಳ ರಾಜ್ಯಪಾಲರು, ಹಲವಾರು ಸಂಸದರು, ಶಾಸಕರು ಆರ್‌ಎಸ್‌ಎಸ್‌ನಲ್ಲಿದ್ದಾರೆ. ಸಂಘಟನೆಯಲ್ಲಿ ಶಿಸ್ತು ಕಲಿಸಲಾಗುತ್ತದೆ. ಆರ್‌ಎಸ್‌ಎಸ್‌ ಬಗ್ಗೆ ತಿಳಿದು ಮಾತನಾಡಬೇಕು. ಅದು ದೇಶಭಕ್ತ ಸಂಘಟನೆ ಎಂದು ಅಶೋಕ್​ ಹೇಳಿದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow