ಟ್ರಾಫಿಕ್ ಪೊಲೀಸರ ಎಡವಟ್ಟಿಗೆ 3 ವರ್ಷದ ಕಂದಮ್ಮ ಸಾವು..! ರಸ್ತೆಯಲ್ಲೇ ಮಗು ಶವವಿಟ್ಟು ಪೋಷಕರ ಗೋಳಾಟ

ಮೇ 26, 2025 - 14:23
 0  48
ಟ್ರಾಫಿಕ್ ಪೊಲೀಸರ ಎಡವಟ್ಟಿಗೆ 3 ವರ್ಷದ ಕಂದಮ್ಮ ಸಾವು..! ರಸ್ತೆಯಲ್ಲೇ ಮಗು ಶವವಿಟ್ಟು ಪೋಷಕರ ಗೋಳಾಟ

ಮಂಡ್ಯ: ಮಂಡ್ಯದಲ್ಲಿ ಮನಕಲುಕುವ ಘಟನೆ ನಡೆದಿದ್ದುನಾಯಿ ಕಚ್ಚಿದ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಹೆಲ್ಮೆಟ್ ಪರಿಶೀಲನೆಗಾಗಿ ಪೊಲೀಸರು ಬೈಕ್ ನಿಲ್ಲಿಸಿದ್ದರಿಂದ ಅಪಘಾತ ಸಂಭವಿಸಿದೆ. ಮೂರೂವರೆ ವರ್ಷದ ಹೃತೀಕ್ಷ ಮೃತ ಮಗು. ವಾಣಿ-ಅಶೋಕ್ ಎಂಬುವವರ ಮಗು ಮೃತಪಟ್ಟಿದೆ. ಮಗಳನ್ನು ಕಳೆದುಕೊಂಡ ದಂಪತಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೊರವನಹಳ್ಳಿಯ ನಿವಾಸಿ.

ಹೃತೀಕ್ಷಾಗೆ ನಾಯಿ ಕಚ್ಚಿದ್ದ ಹಿನ್ನೆಲೆಯಲ್ಲಿ ಮಿಮ್ಸ್ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಹೆಲ್ಮೆಟ್ ತಪಾಸಣೆಗಾಗಿ ಸ್ವರ್ಣಸಂದ್ರ ಬಳಿ ಸಂಚಾರಿ ಠಾಣೆ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಹೀಗಾಗಿ ಮಗು ಸೇರಿದಂತೆ ದಂಪತಿ ಆಯಾ ತಪ್ಪಿ ಬಿದಿದ್ದಾರೆ. ವೇಳೆ ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದು,

ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದೆ. ಮಗುವನ್ನು ಮಡಿನಲ್ಲಿ ಇಟ್ಟುಕೊಂಡು ರಸ್ತೆಯಲ್ಲೇ ಪೋಷಕರು ಗೋಳಾಡಿದ್ದಾರೆ. ಘಟನೆ ಕಣ್ಣಾರೆ ಕಂಡು ಸಾರ್ವಜನಿಕರು ದಿಗ್ಭ್ರಮೆಗೊಂಡರೆ, ಮಂಡ್ಯ ಸಂಚಾರಿ ಪೊಲೀಸರಿಗೆ ಹೆತ್ತಕರುಳು ಹಿಡಿಶಾಪ ಹಾಕಿದೆ. ಸಂಚಾರಿ ಪೊಲೀಸರ ವಿರುದ್ಧ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow