ಡೆಡ್ಲಿ ಅಟ್ಯಾಕ್: ಚಾಕುವಿನಿಂದ ಇರಿದು ನಗರಸಭೆ ಮಾಜಿ ಸದಸ್ಯನ ಹತ್ಯೆ..!

ಉತ್ತರ ಕನ್ನಡ: ವಾಯುವಿಹಾರಕ್ಕೆ ತೆರಳಿದ್ದ ವೇಳೆ ಚಾಕು ಇರಿದು ನಗರಸಭೆ ಮಾಜಿ ಸದಸ್ಯನನ್ನು ಕೊಲೆ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಎಸ್ಎನ್ಎಲ್ ಕಚೇರಿ ಬಳಿ ನಡೆದಿದೆ. ಸತೀಶ್ ಕೋಳಂಕರ್ ಕೊಲೆಯಾದ ನಗರಸಭೆ ಮಾಜಿ ಸದಸ್ಯನಾಗಿದ್ದು, ತಕ್ಷಣ ಸತೀಶ್ರನ್ನ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ವೈಯಕ್ತಿಕ ದ್ವೇಷಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಕಾರವಾರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನೆ ಬಗ್ಗೆ ಎಸ್.ಪಿ ಎಂ ನಾರಾಯಣ್ ಮಾಧ್ಯಮದವರೊಂದಿಗೆ ಮಾತನಾಡಿ, ಕೊಲೆಯಾದ ವ್ಯಕ್ತಿ ಒಬ್ಬ ರೌಡಿ ಶೀಟರ್ ಆಗಿದ್ದ.
ಮಾಜಿ ನಗರಸಭಾ ಸದಸ್ಯ ಕೂಡ ಹೌದು. ಈತನ ಮೇಲೆ 9ಕ್ಕೂ ಹೆಚ್ಚು ಪ್ರಕರಣಗಳಿವೆ. ಸತೀಶ್ ಕೊಳಂಕರ್ ಕಾರವಾರ ತಾಲೂಕಿನ ಚಿತ್ತಾಕುಲ ನಿವಾಸಿ. ಬೆಳಗಿನ ಜಾವ ವಾಯು ವಿಹಾರಕ್ಕೆ ಬಂದಾಗ ಚಾಕುವಿನಿಂದ ಇರಿಯಲಾಗಿತ್ತು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಸಾವು ಆಗಿದೆ ಎಂದಿದ್ದಾರೆ.
ನಿಮ್ಮ ಪ್ರತಿಕ್ರಿಯೆ ಏನು?






