ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಎರಡು ಬಾರಿ ಗ್ಯಾಂಗ್‌ ರೇಪ್..!

ಅಕ್ಟೋಬರ್ 10, 2025 - 22:11
 0  13
ಡ್ರಾಪ್ ಕೊಡುವ ನೆಪದಲ್ಲಿ ಮಹಿಳೆಯನ್ನು ಕರೆದೊಯ್ದು ಎರಡು ಬಾರಿ ಗ್ಯಾಂಗ್‌ ರೇಪ್..!

ಗುಜರಾತ್: ಗಿರ್ ಸೋಮನಾಥ್ ಜಿಲ್ಲೆಯ ಉನಾದಲ್ಲಿ ಬೆಚ್ಚಿಬೀಳಿಸುವ ಘಟನೆ ನಡೆದಿದೆ. ತನ್ನ ಹಳ್ಳಿಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಡ್ರಾಪ್ ಕೊಡುವ ಎಂಬ ನೆಪದಲ್ಲಿ ಕರೆದೊಯ್ದ ಮೂವರು ವ್ಯಕ್ತಿಗಳು, 24 ಗಂಟೆಗಳೊಳಗೆ ಎರಡು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಎಲ್ಲರೂ ಮೀನುಗಾರರು ಎಂದು ತಿಳಿದುಬಂದಿದೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಮಹಿಳೆ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ  ಕುಟುಂಬದವರು ಆಕೆಯನ್ನು ಉನಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ಚಿಕಿತ್ಸೆ ವೇಳೆ ವೈದ್ಯರು ಲೈಂಗಿಕ ದೌರ್ಜನ್ಯ ನಡೆದಿದೆ ಎಂಬುದನ್ನು ಗಮನಿಸಿ, ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದರು.

ನವಬಂದರ್ ಮೆರೈನ್ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ಮಹಿಳೆಯ ಪತಿ 10 ವರ್ಷಗಳ ಹಿಂದೆ ನಿಧನರಾಗಿದ್ದಾರೆಂದು ತಿಳಿದುಬಂದಿದೆ.

 ಒಂದು ವಾರದ ಹಿಂದೆ ಮಾಂಡ್ವಿ ಚೆಕ್‌ಪೋಸ್ಟ್‌ನಿಂದ ತನ್ನ ಹಳ್ಳಿಗೆ ತೆರಳುತ್ತಿದ್ದಾಗ, ಎರಡು ಬೈಕ್‌ಗಳಲ್ಲಿ ಬಂದ ಮೂವರು ಆರೋಪಿಗಳು ಹಳ್ಳಿಗೆ ಬಿಡಲು ಮುಂದಾದರು. ಅವರಿಗೆ ಪರಿಚಯವಿದ್ದ ಕಾರಣ ಆಕೆ ಅವರ ಜೊತೆ ಪ್ರಯಾಣಕ್ಕೆ ಒಪ್ಪಿಕೊಂಡಿದ್ದಳು. ಆದರೆ ಕೆಲವೇ ಕ್ಷಣಗಳಲ್ಲಿ ಅವರು ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸರದಿ ಪ್ರಕಾರ ಅತ್ಯಾಚಾರ ಎಸಗಿದರು.

ಅಷ್ಟೇ ಅಲ್ಲ, ಮೂವರಲ್ಲಿ ಒಬ್ಬನ ಮನೆಗೆ ಕರೆದೊಯ್ದು ಮತ್ತೆ ಅತ್ಯಾಚಾರ ಮಾಡಿರುವುದು ದೂರಿನಲ್ಲಿ ಹೇಳಲಾಗಿದೆ. ಬಳಿಕ ಆರೋಪಿಗಳು ಆಕೆಗೆ ಯಾರಿಗೂ ಈ ವಿಷಯ ತಿಳಿಸಬಾರದು ಎಂದು ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಇನ್ನೂ  ಪೊಲೀಸರು ಹಲವು ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದರು. ಬಳಿಕ ಮೂವರನ್ನೂ ಬಂಧಿಸಿ ವಿಚಾರಣೆ ಮುಂದುವರಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow