ತಕ್ಷಣದಿಂದಲೇ ಕದನ ವಿರಾಮಕ್ಕೆ ಭಾರತ- ಪಾಕಿಸ್ತಾನ ಒಪ್ಪಿಕೊಂಡಿವೆ: ಡೊನಾಲ್ಡ್ ಟ್ರಂಪ್

ಮೇ 10, 2025 - 18:02
 0  11
ತಕ್ಷಣದಿಂದಲೇ ಕದನ ವಿರಾಮಕ್ಕೆ ಭಾರತ- ಪಾಕಿಸ್ತಾನ ಒಪ್ಪಿಕೊಂಡಿವೆ: ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್‌: ಪಾಕಿಸ್ತಾನದ ನಿರಂತರ ದಾಳಿಗಳಿಗೆ ಭಾರತ ಅಷ್ಟೇ ತೀವ್ರವಾಗಿ ತಿರುಗೇಟು ನೀಡುತ್ತಿದೆ. ಪಾಕಿಸ್ತಾನದ ಬಹುತೇಕ ಪ್ರತಿಯೊಂದು ಪ್ರಮುಖ ದಾಳಿಗಳನ್ನೂ ಭಾರತ ವಿಫಲಗೊಳಿಸಿದೆ. ಏತನ್ಮಧ್ಯೆ, ಲಾಹೋರ್‌ನಲ್ಲಿ ಡ್ರೋನ್ ದಾಳಿ ನಡೆದಿದೆ. ಅದೇ ಸಮಯದಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ‘ಭಾರತ, ಪಾಕಿಸ್ತಾನ ಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ’ ಎಂದು ಹೇಳಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರು, ಯುನೈಟೆಡ್ ಸ್ಟೇಟ್ಸ್ ಮಧ್ಯಸ್ಥಿಕೆಯಲ್ಲಿ ನಡೆದ ದೀರ್ಘ ರಾತ್ರಿಯ ಮಾತುಕತೆಯ ಬಳಿಕ,

ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿರುವುದನ್ನು ಘೋಷಿಸಲು ನನಗೆ ಸಂತೋಷವಾಗಿದೆ. ಸಾಮಾನ್ಯ ಬುದ್ಧಿಯನ್ನು ಮತ್ತು ಉನ್ನತ ಬುದ್ಧಿವಂತಿಕೆಯನ್ನು ಬಳಸಿದ ಎರಡೂ ದೇಶಗಳಿಗೆ ಅಭಿನಂದನೆಗಳು. ಈ ವಿಷಯದಲ್ಲಿ ನಿಮ್ಮ ಗಮನಕ್ಕೆ ಧನ್ಯವಾದಗಳು! ಎಂದು ಹೇಳಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow