ತಾಯಿಯ ಪ್ರಿಯಕರನಿಂದ 10 ವರ್ಷದ ಬಾಲಕನ ಹತ್ಯೆ..! ಸೂಟ್ ಕೇಸ್ʼನಲ್ಲಿ ಶವ ಪತ್ತೆ

ಮೇ 12, 2025 - 22:06
 0  18
ತಾಯಿಯ ಪ್ರಿಯಕರನಿಂದ 10 ವರ್ಷದ ಬಾಲಕನ ಹತ್ಯೆ..! ಸೂಟ್ ಕೇಸ್ʼನಲ್ಲಿ ಶವ ಪತ್ತೆ

10 ವರ್ಷದ ಬಾಲಕನನ್ನು ಕೊಲೆ ಮಾಡಿ, ಆತನ ತಾಯಿಯ ಪ್ರಿಯಕರನೇ ಆತನ ದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿಸಿ ಪೊದೆಯಲ್ಲಿ ಎಸೆದಿರುವ ಘಟನೆ ಗುವಾಹಟಿಯಲ್ಲಿ ನಡೆದಿದೆ. ತನ್ನ ಮಗು ಟ್ಯೂಷನ್‌ನಿಂದ ಮನೆಗೆ ಹಿಂತಿರುಗಿಲ್ಲ ಎಂದು ಮಹಿಳೆ ಶನಿವಾರ ಪೊಲೀಸರಿಗೆ ನಾಪತ್ತೆ ದೂರು ನೀಡಿದ ನಂತರ ತನಿಖೆ ಆರಂಭಿಸಲಾಯಿತು.

ತನಿಖೆಯ ಸಮಯದಲ್ಲಿ, ಪತಿಯಿಂದ ಬೇರ್ಪಟ್ಟ ಮಹಿಳೆ ಜಿತುಮೋನಿ ಹಲೋಯ್ ಎಂಬ ಇನ್ನೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾಳೆಂದು ಪೊಲೀಸರಿಗೆ ತಿಳಿದುಬಂದಿದೆ. ಪೊಲೀಸರು ಆತನನ್ನು ವಿಚಾರಿಸಿ ಸೂಟ್‌ಕೇಸ್ ಇರುವ ಸ್ಥಳಕ್ಕೆ ಕರೆದೊಯ್ದಾಗ ಆತ ಅಪರಾಧ ಒಪ್ಪಿಕೊಂಡಿದ್ದಾನೆ.

ನಂತರ ನಗರದ ಹೊರವಲಯದಲ್ಲಿರುವ ಪೊದೆಯೊಂದರಲ್ಲಿ ಸೂಟ್‌ಕೇಸ್‌ನಲ್ಲಿ ತುಂಬಿದ್ದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಹಿಳೆಯನ್ನು ಸಹ ವಶಕ್ಕೆ ಪಡೆಯಲಾಗಿದ್ದು, ಕೊಲೆಯಲ್ಲಿ ಆಕೆಯ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ. ಮಹಿಳೆಯಿಂದ ಬೇರ್ಪಟ್ಟಿರುವ ಮಗುವಿನ ತಂದೆ ಕೂಡ ಪೊಲೀಸರಲ್ಲಿ ಹೇಳಿಕೆ ದಾಖಲಿಸಿದ್ದಾರೆ.

 

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow