ತುಂತುರು ಮಳೆಗೆ ಸರಣಿ ಅಪಘಾತ: ಬೆಂಗಳೂರಿನಲ್ಲಿ 7 ಕಾರುಗಳ ನಡುವೆ ಡಿಕ್ಕಿ!

ಬೆಂಗಳೂರು:- ನಗರದಲ್ಲಿ ಇತ್ತೀಚೆಗೆ ಭಾರೀ ಮಳೆ ಸುರಿಯುತ್ತಿದ್ದು, ನಾನಾ ಅನಾಹುತಗಳು ಸಂಭವಿಸುತ್ತಿದೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಗೆ ವಾಹನ ಸವಾರರು ಹಾಗೂ ಸಾರ್ವಜನಿಕರು ಹೈರಾಣಾಗಿದ್ದಾರೆ. ಅದರಂತೆ ಇಂದು ಮುಂಜಾನೆ ತುಂತುರು ಮಳೆ ಸೂರಿಯುತ್ತಿದ್ದು, ಈ ವೇಳೆ ಸರಣಿ ಅಪಘಾತ ಸಂಭವಿಸಿದೆ. ಯಲಹಂಕಕ್ಕೆ ತೆರಳುವ ಮುಖ್ಯರಸ್ತೆಯಲ್ಲಿ 7 ಕಾರುಗಳು ಡಿಕ್ಕಿ ಹೊಡೆದಿವೆ. ಸದ್ಯ ಹೆಚ್ಚಿನ ಅನಾಹುತ ಸಂಭವಿಸಿಲ್ಲ.
ಸರಣಿ ಅಪಘಾತ ಹಿನ್ನೆಲೆಯಲ್ಲಿ ಈ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿದ್ದು ಫ್ಲೈ ಓವರ್ ಬಳಿ ವಾಹನಗಳು ಸಾಲುಗಟ್ಟಿ ನಿಂತಿವೆ. ನಿಧಾನಗತಿಯಲ್ಲಿ ವಾಹನಗಳು ಸಂಚರಿಸುತ್ತಿವೆ. ಇಂದೂ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ
ನಿಮ್ಮ ಪ್ರತಿಕ್ರಿಯೆ ಏನು?






