ದೀಪಾವಳಿ ವಿಶೇಷ: ಅಯೋಧ್ಯೆಯಲ್ಲಿ ಬೆಳಗಿದ 25 ಲಕ್ಷ ಹಣತೆ, ಗಿನ್ನಿಸ್ ದಾಖಲೆ ಸೇರ್ಪಡೆ!

ಅಯೋಧ್ಯೆ:- ದೀಪಾವಳಿ ಪ್ರಯುಕ್ತ ಅಯೋಧ್ಯೆಯಲ್ಲಿ 25 ಲಕ್ಷ ದೀಪದ ಹಣತೆ ಬೆಳಗಿದ್ದು, ಹೊಸ ಗಿನ್ನೆಸ್ ದಾಖಲೆ ಬರೆದಿದೆ.
ಸರಯೂ ನದಿಯ ದಡದಲ್ಲಿ 25 ಲಕ್ಷಕ್ಕೂ ಹೆಚ್ಚು ಹಣತೆಗಳನ್ನು ಬೆಳಗಿಸಲಾಯಿತು. ಆ ಮೂಲಕ ಹೊಸ ಗಿನ್ನೆಸ್ ವಿಶ್ವ ದಾಖಲೆ ಬರೆಯಲಾಯಿತು.
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸಂಪುಟ ಸಹೋದ್ಯೋಗಿಗಳ ಜತೆ ಹಣತೆಗಳನ್ನು ಬೆಳಗುವ ಮೂಲಕ ದೀಪೋತ್ಸವಕ್ಕೆ ಚಾಲನೆ ನೀಡಿದರು
ದೀಪೋತ್ಸವದಲ್ಲಿ ರಾಮಾಯಣದ ಘಟನೆಗಳನ್ನು ಚಿತ್ರಿಸುವ ಲೇಸರ್ ಶೋ ಮತ್ತು ಡ್ರೋನ್ ಪ್ರದರ್ಶನವನ್ನು ಸಹ ಏರ್ಪಡಿಸಲಾಗಿತ್ತು. ಆಚರಣೆಯು ಆರು ದೇಶಗಳನ್ನು ಪ್ರತಿನಿಧಿಸುವ ಕಲಾವಿದರಿಂದ ಸಾಂಸ್ಕೃತಿಕ ಪ್ರದರ್ಶನಗಳನ್ನು ಒಳಗೊಂಡಿತ್ತು. ಮ್ಯಾನ್ಮಾರ್, ನೇಪಾಳ, ಥೈಲ್ಯಾಂಡ್, ಮಲೇಷ್ಯಾ, ಕಾಂಬೋಡಿಯಾ ಮತ್ತು ಇಂಡೋನೇಷ್ಯಾ ಕಲಾವಿದರು ಭಾಗವಹಿಸಿದ್ದರು.
ನಿಮ್ಮ ಪ್ರತಿಕ್ರಿಯೆ ಏನು?






