ದೆಹಲಿಯಲ್ಲಿ AAPಗೆ ಹೀನಾಯ ಸೋಲು: ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ!

ಫೆಬ್ರವರಿ 8, 2025 - 16:24
 0  17
ದೆಹಲಿಯಲ್ಲಿ AAPಗೆ ಹೀನಾಯ ಸೋಲು: ಅರವಿಂದ್ ಕೇಜ್ರಿವಾಲ್ ಮೊದಲ ಪ್ರತಿಕ್ರಿಯೆ!

ನವದೆಹಲಿ:- ಎಎಪಿ ವರಿಷ್ಠ ಹಾಗೂ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ಭಾರಿ ಮುಖಭಂಗವಾಗಿದೆ.

ಸೋತ ಬೆನ್ನಲ್ಲೇ ಅರವಿಂದ್ ಕೇಜ್ರಿವಾಲ್ ಮೊದಲ ಬಾರಿ ಪ್ರತಿಕ್ರಿಯೆ ನೀಡಿ ಬಿಜೆಪಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಜನರ ಆದೇಶವನ್ನು ನಾವು ಅತ್ಯಂತ ನಮ್ರತೆಯಿಂದ ಸ್ವೀಕರಿಸುತ್ತೇವೆ. ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಚುನಾವಣೆಯಲ್ಲಿ ಅವರು ನೀಡಿದ ಎಲ್ಲಾ ಭರವಸೆಗಳನ್ನುಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದರು.

ಕಳೆದ 10 ವರ್ಷಗಳಲ್ಲಿ ನಾವು ಆರೋಗ್ಯ, ಶಿಕ್ಷಣ, ಮೂಲಸೌಕರ್ಯ ಕ್ಷೇತ್ರದಲ್ಲಿ ಸಾಕಷ್ಟು ಕೆಲಸ ಮಾಡಿದ್ದೇವೆ. ನಾವು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡುವುದರ ಜೊತೆಗೆ ಜನರ ನಡುವೆಯೇ ಇದ್ದು ಅವರಿಗೆ ಸೇವೆ ಸಲ್ಲಿಸುವುದನ್ನು ಮುಂದುವರಿಸುತ್ತೇವೆ ಎಂದರು.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow