ದೇಶದ ಅತ್ಯಂತ ಶ್ರೀಮಂತ ಸಿಎಂಗಳ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ ಎಷ್ಟನೇ ಸ್ಥಾನದಲ್ಲಿದ್ದಾರೆ ಗೊತ್ತಾ..?

ಡಿಸೆಂಬರ್ 31, 2024 - 22:07
 0  23
ದೇಶದ ಅತ್ಯಂತ ಶ್ರೀಮಂತ ಸಿಎಂಗಳ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ ಎಷ್ಟನೇ ಸ್ಥಾನದಲ್ಲಿದ್ದಾರೆ ಗೊತ್ತಾ..?

ನವದೆಹಲಿ: ದೇಶದಲ್ಲಿ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಯಾವ ರಾಜ್ಯದ ಮುಖ್ಯಮಂತ್ರಿ ಯಾವ ಸ್ಥಾನವನ್ನು ಹೊಂದಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಯಾವ ಸ್ಥಾನವನ್ನು ಹೊಂದಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ದೇಶದಲ್ಲೇ ಅತಿ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರನೇ ಸ್ಥಾನದಲ್ಲಿದ್ದಾರೆ.

ಅಸೋಸಿಯೇಷನ್‌ ಆಫ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಮತ್ತು ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಸಂಸ್ಥೆ ಸರ್ವೆ ನಡೆಸಿದ್ದು, ವರದಿಯೊಂದನ್ನು ಬಿಡುಗಡೆ ಮಾಡಿದೆ. ವರದಿ ಪ್ರಕಾರ, ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಅವರು ನಂಬರ್‌ 1 ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ಅವರು ನಂಬರ್‌ 2 ಶ್ರೀಮಂತ ಸಿಎಂ ಗಳಾಗಿದ್ದಾರೆ.

ಆಂಧ್ರ ಸಿಎಂ 931 ಕೋಟಿ ಹಾಗೂ ಅರುಣಾಚಲ ಪ್ರದೇಶದ ಸಿಎಂ 332 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. 3ನೇ ಸ್ಥಾನದಲ್ಲಿರುವ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರ ಬಳಿ 51 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ (15 ಲಕ್ಷ), ಜಮ್ಮು-ಕಾಶ್ಮೀರದ ಸಿಎಂ ಓಮರ್‌ ಅಬ್ದುಲ್ಲಾ (55 ಲಕ್ಷ),

ಕೇರಳದ ಸಿಎಂ ಪಿಣರಾಯಿ ವಿಜಯನ್‌ 1.18 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದು, ದೇಶದಲ್ಲೇ ಅತಿ ಕಡಿಮೆ ಆಸ್ತಿ ಹೊಂದಿರುವ ಸಿಎಂಗಳಾಗಿದ್ದಾರೆ. ಸಿದ್ದರಾಮಯ್ಯ ಅವರು 23 ಕೋಟಿ ಸಾಲ ಹೊಂದಿದ್ದಾರೆ. ಪೆಮಾ ಖಂಡು 180 ಕೋಟಿ ಹಾಗೂ ನಾಯ್ಡು 10 ಕೋಟಿ ಸಾಲ ಹೊಂದಿದ್ದಾರೆ. ದೇಶದ 31 ಮುಖ್ಯಮಂತ್ರಿಗಳ ಒಟ್ಟು ಆಸ್ತಿ 1,630 ಕೋಟಿ ರೂ. ಎಂದು ಸಂಸ್ಥೆ ವರದಿ ತಿಳಿಸಿದೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow