ದೇಹದ ಮೇಲೆಯೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ..!

ಜುಲೈ 18, 2025 - 22:19
 0  12
ದೇಹದ ಮೇಲೆಯೇ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ..!

ನವದೆಹಲಿ: ಉತ್ತರ ಪ್ರದೇಶದ ಭಾಗ್ಪತ್ 28 ವರ್ಷದ ಮಹಿಳೆಯೊಬ್ಬರು ವರದಕ್ಷಿಣೆ ಕಿರುಕುಳದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ, ಅವರು ತಮ್ಮ ದೇಹದ ಮೇಲೆ ಆತ್ಮಹತ್ಯೆ ಪತ್ರ ಬರೆದಿದ್ದಾರೆ. ಮನೀಷಾ ಎಂಬ ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಮ್ಮ ಕಾಲುಗಳು, ಕೈಗಳು ಮತ್ತು ಹೊಟ್ಟೆಯ ಮೇಲೆ ಪೆನ್ನು ಹಿಡಿದು ಡೆತ್ ನೋಟ್ ಬರೆದಿದ್ದಾರೆ. ಪತಿ ಕುಂದನ್ ಮತ್ತು ಅವರ ಕುಟುಂಬದವರ ಕಿರುಕುಳ ತಾಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಅವರು ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ

ಮನೀಷಾ 2023ರಲ್ಲಿ ನೋಯ್ಡಾ (Noida) ನಿವಾಸಿ ಕುಂದನ್ ಅವರನ್ನು ವಿವಾಹವಾಗಿದ್ದರು. ಮದುವೆಯಾದ ಕೆಲ ತಿಂಗಳಲ್ಲೇ ಪತಿ ಹಾಗೂ ಅತ್ತೆ ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು ಬರೆದಿದ್ದಾರೆಅಲ್ಲದೇ ಮನೀಷಾ ವೀಡಿಯೋ ಮೂಲಕವು ಕಿರುಕುಳದ ಕ್ರೂರತೆ ಬಗ್ಗೆ ವಿವರಿಸಿದ್ದಾರೆ. ವೀಡಿಯೋ ಕ್ಲಿಪ್ನಲ್ಲಿ ಮನೀಷಾ ಅಳುತ್ತಾ ತನ್ನ ಪತಿ, ಅವರ ತಾಯಿ, ತಂದೆ ಮತ್ತು ಸಹೋದರ ವರದಕ್ಷಿಣೆಗಾಗಿ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು.

ಮದುವೆ ಸಂದರ್ಭದಲ್ಲಿ ಮನೀಷಾ ಕುಟುಂಬಸ್ಥರು 20 ಲಕ್ಷ ರೂ. ಖರ್ಚು ಮಾಡಿದ್ದರು. ಅಲ್ಲದೇ ವರದಕ್ಷಿಣೆಯಾಗಿ ಬುಲೆಟ್ ಬೈಕ್ ಸಹ ನೀಡಿದ್ದರು. ಆದರೆ ಪತಿ ಮನೆಯವರು ಪದೇ ಪದೇ ಕಾರು ಮತ್ತು ಹಣವನ್ನು ಕೇಳುತ್ತಿದ್ದರು ಎಂದಿದ್ದಾರೆ. ಅತ್ತೆ ಮತ್ತು ಪತಿ ತನ್ನನ್ನು ಹೊಡೆಯುತ್ತಿದ್ದರು. ಅಲ್ಲದೇ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಾಯಿಸುತ್ತಿದ್ದರು. ವರದಕ್ಷಿಣೆ ಬೇಡಿಕೆಗಳಿಗೆ ಮಣಿಯದಿದ್ದಾಗ, ಅತ್ತೆ ಮತ್ತು ಪತಿ ವಿದ್ಯುತ್ ಸ್ಪರ್ಶಿಸಿ ಕೊಲ್ಲಲು ಪ್ರಯತ್ನಿಸಿದ್ದರು ಎಂದು ಆರೋಪಿಸಿದ್ದಾರೆ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow