ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಯಾವ ಜಿಲ್ಲೆಗೆ ಯಾವ ಸ್ಥಾನ? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

ಎಪ್ರಿಲ್ 8, 2025 - 14:14
 0  14
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಯಾವ ಜಿಲ್ಲೆಗೆ ಯಾವ ಸ್ಥಾನ? ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ!

ಬೆಂಗಳೂರು:-ರಾಜ್ಯಾದ್ಯಂತ ಮಾರ್ಚ್ 01 ರಿಂದ 20 ರವರೆಗೆ ನಡೆಸಿದ್ದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಫಲಿತಾಂಶ ಪ್ರಕಟಿಸಿದ್ದಾರೆ.

ಫಲಿತಾಂಶದ ಪ್ರಕಾರ, ಉಡುಪಿ ಜಿಲ್ಲೆಗೆ ಶೇ.93.90ರಷ್ಟು ಫಲಿತಾಂಶದೊಂದಿಗೆ ಮೊದಲ ಸ್ಥಾನ ಸಿಕ್ಕರೆ, ಯಾದಗಿರಿ ಜಿಲ್ಲೆಗೆ 48.45ಕೊನೆಯ ಸ್ಥಾನ ಸಿಕ್ಕಿದೆ. 2ನೇ ಸ್ಥಾನಕ್ಕೆ ದಕ್ಷಿಣ ಕನ್ನಡ ಜಿಲ್ಲೆ ಹಾಗೂ 3ನೇ ಸ್ಥಾನ ಬೆಂಗಳೂರು ದಕ್ಷಿಣಕ್ಕೆ ಸಿಕ್ಕಿದೆ.

ಫಲಿತಾಂಶ 2025 ಪರಿಶೀಲಿಸುವುದು ಹೇಗೆ?

ಮಂಡಳಿಯ ಅಧಿಕೃತ ವೆಬ್ ಸೈಟ್ ಗಳಾದ kseab.karnataka.gov.in ಮತ್ತು karresults.nic.in ನಲ್ಲಿ ನಿಮ್ಮ ನೋಂದಣಿ ಸಂಖ್ಯೆ ಹಾಕುವ ಮೂಲಕ ವೀಕ್ಷಿಸಬಹುದು. 2025 ರ ದ್ವಿತೀಯ ಪಿಯುಸಿ ಫಲಿತಾಂಶಗಳ ಮೇಲೆ ಕ್ಲಿಕ್ ಮಾಡಿ ನಿಮ್ಮ ನೋಂದಣಿ ಸಂಖ್ಯೆಯನ್ನು ಭರ್ತಿ ಮಾಡಿ ನಿಮ್ಮ ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2025 ಅನ್ನು ಡೌನ್‌ಲೋಡ್ ಮಾಡಿ.

ನಿಮ್ಮ ಪ್ರತಿಕ್ರಿಯೆ ಏನು?

like

dislike

love

funny

angry

sad

wow